ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಶಸ್ಸಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕ್ರಮಗಳು

2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಈ ಬಾರಿ ಪದವಿ ಪೂರ್ವ ಶಿಕ್ಷಣ ಇಲಾಖೆಯು ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ.

2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಕೆಲ ಕ್ರಮಗಳನ್ನು ಕೈಗೆತ್ತಿಕೊಂಡಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೆಂದ್ರಗಳಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸುವುದರ ಜೊತೆಗೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಡಿವಾಣ ಹಾಕಲು ಹೊಸ ನಿಯಮಗಳನ್ನು ರೂಪಿಸಿದೆ.

2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಿಂದ ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಅನುಷ್ಠಾನಗೊಳಿಸಲಾಗುತ್ತಿದೆ.

ಪರೀಕ್ಷಾ ಕೆಂದ್ರಗಳು

ಅತೀ ಹೆಚ್ಚು ಪರೀಕ್ಷಾ ಕೇಂದ್ರಗಳು
ಬೆಂಗಳೂರು: 79 ಪರೀಕ್ಷಾ ಕೇಂದ್ರಗಳು
ಅತೀ ಕಡಿಮೆ ಪರೀಕ್ಷಾ ಕೇಂದ್ರಗಳು
ರಾಮನಗರ : 12 ಪರೀಕ್ಷಾ ಕೇಂದ್ರಗಳು
ರಾಜ್ಯದಲ್ಲಿ ಒಟ್ಟು 998 ಪರೀಕ್ಷಾ ಕೇಂದ್ರಗಳು

ಪರೀಕ್ಷಾ ದಿನಾಂಕ

2017 ರ ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 09 -03 -2017 ರಿಂದ 27 -03 -2017 ರವರೆಗೆ ನಡೆಸಲಾಗುತ್ತಿದ್ದು ಪರೀಕ್ಷೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಪರೀಕ್ಷೆ ಸಮಯ

ಬೆಳಿಗ್ಗೆ 10 -15 ರಿಂದ ಮಧ್ಯಾಹ್ನ 1 -30 ರವರೆಗೆ

ಶಿಕ್ಷಣ ಇಲಾಖೆಯ ಕ್ರಮಗಳು

ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರ

1 ) ಹೊಸಬರು (Freshers) - 5,48,903
2 ) ಪುನರಾವರ್ತಿ (Repeaters)-30,252
3 ) ಖಾಸಗಿ (Private)-1,05,092
ಒಟ್ಟು -6,84,247

ಸಂಯೋಜನೆವರು ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರ

1 ) ಕಾಲ ವಿಭಾಗ -2,17,075
2 ) ವಾಣಿಜ್ಯ ವಿಭಾಗ-2,48,423
3 ) ವಿಜ್ಞಾನ ವಿಭಾಗ-2,18,749
ಒಟ್ಟು- 6,84,247

Randomisation

  1. ಬಹು ಪರೀಕ್ಷಾ ಕೇಂದ್ರಗಳಿರುವ ನಗರಗಳಲ್ಲಿ Randomisation ಮಾಡಲಾಗಿದೆ.
  2. ಒಂದು ಪರೀಕ್ಷಾ ಕೇಂದ್ರದಲ್ಲಿ ಸುಮಾರು 500 ರಿಂದ 1000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಆಸನ ವ್ಯವಸ್ಥೆ ಹಾಗು ಇತರೆ ಮೂಲಭೂತ ಸೌಲಭ್ಯಗಳನ್ನು ಗಮನಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
  3. ಕೆಲವು ತಾಲೂಕು ಕೇಂದ್ರಗಳಲ್ಲಿ ಹಾಗೂ ಒಂದೇ ಪರೀಕ್ಷಾ ಕೇಂದ್ರಗಳಿರುವ ಸಂದರ್ಭದಲ್ಲಿ ಹಾಗೂ ಗ್ರಾಮೀಣ ಪ್ರದೇಶದ ಪರೀಕ್ಷಾ ಕೇಂದ್ರಗಳಿಗೆ Randomisation ನಿಂದ ಈ ಬಾರಿ ವಿನಾಯಿತಿ ನೀಡಲಾಗಿದೆ.
  4. ಪಾರದರ್ಶಕತೆ ಗಮನದಲ್ಲಿಟ್ಟುಕೊಂಡು ಆಯಾ ಜಿಲ್ಲಾ ಉಪನಿರ್ದೇಶಕರುಗಳು ಮಾಡಿರುವ Randomisation ಪಟ್ಟಿಯನ್ನು ಇಲಾಖೆ ಅನುಮೋದಿಸಿದೆ.

ಜಿಲ್ಲಾ ಪರೀಕ್ಷಾ ಕೇಂದ್ರಗಳ ಪಟ್ಟಿಯನ್ನು ಈಗಾಗಲೇ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರಿಗೆ ಕಳುಹಿಸಿ ಕೊಡಲಾಗಿದೆ. ಜಿಲ್ಲಾ ಉಪನಿರ್ದೇಶಕರುಗಳು ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಸಂಬಂಧಿಸಿದ ಕಾಲೇಜುಗಳ ಪ್ರಾಚಾರ್ಯರುಗಳಿಗೆ ತಿಳಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

ಪ್ರತಿ ಕಾಲೇಜಿಗೆ ಪ್ರಾಚಾರ್ಯರು ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಹಾಕುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಮಾಹಿತಿಯನ್ನು ನೀಡುವಂತೆ ಸೂಚನೆ ನೀಡಲಾಗಿದೆ. 2017 ಮಾರ್ಚ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಈಗಾಗಲೇ ಸಂಬಂಧಿಸಿದ ಕಾಲೇಜುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ.

ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರಗಳನ್ನು ವಿತರಿಸುವಾಗ ಪರಿಶೀಲಿಸಿ ನಂತರ ವಿತರಿಸುವಂತೆ ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ತಿದ್ದುಪಡಿಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು

ವಿಶೇಷ ಕ್ರಮಗಳು

  • ಪರೀಕ್ಷಾ ಸಮಯದಲ್ಲಿ ನಕಲು ಮಾಡಿದರೆ 3 ವರ್ಷ ಪರೀಕ್ಷೆ ಬ್ಯಾನ್
  • ಪರೀಕ್ಷಾ ಅಕ್ರಮಗಳಿಗೆ ಪ್ರೋತ್ಸಾಹ ನೀಡುವಂತಹ ಖಾಸಗಿ ಕಾಲೇಜುಗಳ ಮಾನ್ಯತೆಯನ್ನು ಮೂರು ವರ್ಷ ಹಿಂದಕ್ಕೆ ಪಡೆಯಲಾಗುತ್ತದೆ.
  • ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ಐದು ಲಕ್ಷ ದಂಡ ಇತ್ಯಾದಿ ಅಂಶಗಳು ಸರ್ಕಾರದ ಚಿಂತನೆಯಲ್ಲಿವೆ.

ಹೆಚ್ಚಿನ ಮಾಹಿತಿಗಾಗಿ : http://www.pue.kar.nic.in/home.asp ವೆಬ್ಸೈಟ್ ವಿಳಾಸ ನೋಡಿ.

ಇದನ್ನು ಗಮನಿಸಿ: 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

For Quick Alerts
ALLOW NOTIFICATIONS  
For Daily Alerts

English summary
Measures taken by DPUE for conducting 2017 March II PUC examination
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X