ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಈ ಬಾರಿಯ ಪೂರಕ ಪರೀಕ್ಷೆಯಲ್ಲಿ 2.51 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್‌ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿವೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ 2.51 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್‌ನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಜೂನ್ 28ರಿಂದ ಜುಲೈ 8ರ ವರೆಗೆ ನಡೆಯಲಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಫಲಿತಾಂಶಗಳು ನೀಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಮಾರ್ಚ್ ತಿಂಗಳಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 6,79,061 ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 3,23,364 ವಿದ್ಯಾರ್ಥಿಗಳು ಅನುತ್ತೀರ್ಣ ಆಗಿದ್ದರು. ಇದರಲ್ಲಿ 2,51,636 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಪಿಯುಸಿ ಪರೀಕ್ಷಾ ವೇಳಾಪಟ್ಟಿ

ದಿನಾಂಕ

ವಿಷಯ

(ಸಮಯ ಬೆ.10:15 ರಿಂದ ಮಧ್ಯಾಹ್ನ 1:30)

ವಿಷಯ

(ಸಮಯ: ಮಧ್ಯಾಹ್ನ 2:30 ರಿಂದ ಸಂಜೆ 5:45)

ಜೂನ್ 28

ಸಮಾಜ ವಿಜ್ಞಾನ, ಲೆಕ್ಕಶಾಸ್ತ್ರ, ಭೌತಶಾಸ್ತ್ರ

ಜೂನ್ 29

ಹಿಂದಿ, ಸಂಸ್ಕೃತ

ಉರ್ದು
ಜೂನ್ 30
ಅರ್ಥಶಾಸ್ತ್ರ, ಗಣಿತ
ತರ್ಕಶಾಸ್ತ್ರ
ಜುಲೈ 01
ಇತಿಹಾಸ, ಗೃಹ ವಿಜ್ಞಾನ
ಜುಲೈ 03
ಇಂಗ್ಲಿಷ್
ಜುಲೈ 04
ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ
ಜುಲೈ 05
ಕನ್ನಡ, ತಮಿಳು, ತೆಲುಗು, ಮಲಯಾಳಂ, ಫ್ರೆಂಚ್
ಮರಾಠಿ ಅರೇಬಿಕ್
ಜುಲೈ 06
ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
ಜುಲೈ 07
ಭೂಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಕರ್ನಾಟಿಕ್ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ
ಜುಲೈ 08ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್

ತಿಂಗಳೊಳಗೆ ಫಲಿತಾಂಶ

ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಆದಷ್ಟು ಬೇಗ ಫಲಿತಾಂಶ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಮುಗಿದ ಒಂದೆರಡು ದಿನಗಳಲ್ಲೇ ಮೌಲ್ಯಮಾಪನ ಆರಂಭಿಸಿ ಜುಲೈ ಅಂತ್ಯದೊಳಗೆ ಫಲಿತಾಂಶ ನೀಡವುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

303 ಕೇಂದ್ರಗಳಲ್ಲಿ ಪರೀಕ್ಷೆ

ರಾಜ್ಯದ 303 ಮೂರು ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಯಲಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Second puc supplementary exams starts from tomorrow, this time more than 2.51 lakh students appearing for exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X