32 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ದ್ವಿತೀಯ ಪಿಯುಸಿ, ಸಿಬಿಎಸ್ ಇ ಹಾಗೂ ಐಸಿಎಸ್ ಇ ನಡೆಸುವ ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 24 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಖಾಲಿಯಿರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮೂವತ್ತೆರಡು ಹುದ್ದೆಗಳು ಖಾಲಿ ಇದ್ದು, ಈ ಎಲ್ಲ ಹೈದರಾಬಾದ್-ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗಾಗಿಯೇ ಮೀಸಲಾಗಿವೆ.

ದ್ವಿತೀಯ ಪಿಯುಸಿ, ಸಿಬಿಎಸ್ ಇ ಹಾಗೂ ಐಸಿಎಸ್ ಇ ನಡೆಸುವ ಹನ್ನೆರಡನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 24 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ

  • ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ
  • ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ

ಅರ್ಜಿ ಸಲ್ಲಿಕೆ

  • ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ.
  • ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಿದವರು ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
  • ಅಭ್ಯರ್ಥಿಯು ಆನ್-ಲೈನ್ ಅರ್ಜಿಯನ್ನು ಭರ್ತಿ ಮಾಡಿದ ನಂತರ ಸ್ವೀಕೃತಿ ಪತ್ರ ತೆಗೆದುಕೊಳ್ಳತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.400/-
  • ಪ.ಜಾ/ಪ.ಪಂ/ಪ್ರ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.200/-
  • ಶುಲ್ಕವನ್ನು ಆನ್-ಲೈನ್ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-06-2017
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-06-2017
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ನಿಗಧಿಪಡಿಸಿದ ದಿನಾಂಕ:24-07-2017
  • ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ:10-08-2017
  • ತಾತ್ಕಾಲಿಕ ಆಯ್ಕೆ ಪಟ್ಟಿಯಂತೆ ಅಭ್ಯರ್ಥಿಗಳ ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆ ಜಿಲ್ಲಾಧಿಕಾರಿಗಳ ಕಛೇರಿಗೆ ಹಾಜರಾಗಲು ನಿಗಧಿಪಡಿಸಿದ ದಿನಾಂಕ: 25-08-2017 ಬೆಳಿಗ್ಗೆ: 11.00 ಗಂಟೆಗೆ
  • ಆಯ್ಕೆ ಪಟ್ಟಿ ಪ್ರಕಟಿಸಲು ನಿಗಧಿಪಡಿಸಿದ ದಿನಾಂಕ: 15-09-2017

ಆಯ್ಕೆ ವಿಧಾನ

ಈ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಿಕೊಳ್ಳಲಾಗುವುದು.

ಅಭ್ಯರ್ಥಿಗಳು ಮೂಲ ದಾಖಲಾತಿಗಳನ್ನು ಪರಿಶೀಲನೆಗಾಗಿ ಹಾಜರಾಗಲು ಪ್ರವೇಶ ಪತ್ರಗಳನ್ನು ಪ್ರತ್ಯೇಕ ರವಾನಿಸಲಾಗುವುದಿಲ್ಲ. ಸದರಿ ಪ್ರವೇಶ ಪತ್ರಗಳನ್ನು ಕಛೇರಿಯ ಅಂತರ್ಜಾಲದಿಂದ ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ kalaburagi-va.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Applications are invited to recruit village accountant officer posts from eligible candidates in Kalburagi dist.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X