ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರರ ನೇಮಕಾತಿ

ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 09 ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವೆಬ್ಸೈಟ್ ಮೂಲಕ ಅನ್-ಲೈನ್ ಅರ್ಜಿಯನ್ನು ಭರ್ತಿ ಮಾಡಿ ಜುಲೈ 08 ರೊಳಗೆ ಸಲ್ಲಿಸತಕ್ಕದ್ದು.

ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 09 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅನ್-ಲೈನ್ ಅರ್ಜಿಯನ್ನು ಭರ್ತಿ ಮಾಡಿ ಜುಲೈ 08 ರೊಳಗೆ ಸಲ್ಲಿಸತಕ್ಕದ್ದು.

ಹುದ್ದೆಗಳ ವಿವರ

ಬೆರಳಚ್ಚುಗಾರರು: 09 ಹುದ್ದೆಗಳು
ವೇತನ ಶ್ರೇಣಿ: ರೂ.11600-21000 ಹಾಗೂ ಇತರ ಭತ್ಯೆಗಳೊಂದಿಗೆ

ಬೆರಳಚ್ಚುಗಾರರ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆಹೊಂದಿರಬೇಕು.

ಆಯ್ಕೆ ವಿಧಾನ

ಅಭ್ಯರ್ಥಿಯು ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನುಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಅಯ್ಕೆ ಮಾಡಲಾಗುವುದು.

ವಯೋಮಿತಿ

08-07-2017 ರಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು,

  • ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ: 38 ವರ್ಷ
  • ಪ.ಜಾ, ಪ.ಪಂ, ಪ್ರ-1 : 40 ವರ್ಷ

ಪರಿವೀಕ್ಷಣಾ ಅವಧಿ

ಆಯ್ಕೆಯಾದ ಅಭ್ಯಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977 ರ ಪ್ರಕಾರ 02 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಯೊಂದಿಗೆ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300/-
  • ಒಬಿಸಿ ಅಭ್ಯರ್ಥಿಗಳಿಗೆ ರೂ.150/-
  • ಪ.ಜಾ/ಪ.ಪಂ/ಪ್ರ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
  • ನಿಗದಿತ ಶುಲ್ಕವನ್ನು ನ್ಯಾಯಾಲಯದ /ecourts.gov.in/kodagu/online-recruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ State Bank Collect ಮೂಲಕ online payment through net banking/credit card/debit card/challan download ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ecourts.gov.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Online applications are invited to fill the typist posts in Kodagu district court through direct recruitment.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X