ಕರ್ನಾಟಕ ಹೈಕೋರ್ಟ್ ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆ ನೇಮಕಾತಿ

ಎಸ್ ಎಸ್ ಎಲ್ ಸಿ ಓದಿದವರು ಮತ್ತು ಶೀಘ್ರಲಿಪಿ ಕಲಿತವರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳನ್ನು ಮೌಖಿಕ ಮತ್ತು ಪ್ರಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 42 ಕೋರ್ಟ್ ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಎಸ್ ಎಲ್ ಸಿ ಓದಿದವರು ಮತ್ತು ಶೀಘ್ರಲಿಪಿ ಕಲಿತವರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳನ್ನು ಮೌಖಿಕ ಮತ್ತು ಪ್ರಯೋಗಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆ ನೇಮಕಾತಿ
ವಿದ್ಯಾರ್ಹತೆ
  • ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
  • ಆಂಗ್ಲ ಶೀಘ್ರಲಿಪಿ ಪೌಢ ದರ್ಜೆ ಅಥವಾ ಪ್ರೊಫೆಶಿಯನ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕರ್ನಾಟಕ ಪೌಢ ಶಿಕ್ಷಣ ಮಂಡಳಿ ನಡೆಸುವ ಆಂಗ್ಲ ಪೌಢ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.
  • ಕರ್ನಾಟಕ ಪೌಢ ಶಿಕ್ಷಣ ಮಂಡಳಿ ಅಥವಾ ಟೆಕ್ನಿಕಲ್ ಬೋರ್ಡ್ ನಡೆಸುವ ಆಂಗ್ಲ ಕಮರ್ಷಿಯಲ್ ಪ್ರಾಕ್ಟೀಸ್ / ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೋಮದಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಮತ್ತು ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರಬೇಕು.

ವೇತನ ಶ್ರೇಣಿ : ರೂ.20000-500-21000-600-24600-700-28800-800-33600-900-36300/-

ಸೇವೆಯ ಪರಿವೀಕ್ಷಣ ಅವಧಿ

ಅಭ್ಯರ್ಥಿಯು ನೇಮಗೊಂಡ ಪಕ್ಷದಲ್ಲಿ ಪ್ರಾರಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

ವಯೋಮಿತಿ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷದವರರಾಗಿರಬೇಕು.

  • ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಥವಾ ಇತರೆ ಹಿಂದುಳಿದ ಜಾತಿಗಳ ಪ್ರವರ್ಗ-1ಕ್ಕೆ ಸೇರಿದ ಪಕ್ಷದಲ್ಲಿ ಅವರು ಗರಿಷ್ಟ 40 ವರ್ಷ ವಯಸ್ಸು ಮೀರಿರಬಾರದು.
  • ಇತರೆ ಹಿಂದುಳಿದ ವರ್ಗಗಳ ಪ್ರವರ್ಗ '2ಎ' ಅಥವಾ '2ಬಿ' ಅಥವಾ '3ಎ' ಅಥವಾ '3ಬಿ' ಗೆ ಸೇರಿದ್ದಲ್ಲಿ ಗರಿಷ್ಟ 38 ವರ್ಷ ವಯಸ್ಸು ಮೀರಿರಬಾರದು.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ ವಯಸ್ಸು ಮೀರಿರಬಾರದು.

ನೇಮಕಾತಿ ವಿಧಾನ

ಅಭ್ಯರ್ಥಿಗಳ ಆಯ್ಕೆಯನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದಂಥ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಸೇವಾ ಮತ್ತು ನೇಮಕಾತಿ ಷರತ್ತುಗಳು) ನಿಯಮಗಳು, 1973 ಮತ್ತು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾದಂಥ ಕರ್ನಾಟಕ ಉಚ್ಚ ನ್ಯಾಯಾಲಯ ಸೇವಾ (ಆಯ್ಕೆಯ ಮೂಲಕ ನೇರ ನೇಮಕಾತಿ) ನಿಯಮಗಳು, 1984 ಇವುಗಳ ಅನುಸಾರವಾಗಿ ಮಾಡಲಾಗುವುದು.

ಇದನ್ನು ಗಮನಿಸಿ: ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ

ಆಯ್ಕೆ ವಿಧಾನ

ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಕೆ

ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ವೆಬ್ಸೈಟ್ ವಿಳಾಸ karnatakajudiciary.kar.nic.in

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಪ್ರಮುಖ ದಿನಾಂಕಗಳು

ಆನ್‍ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2017
ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆಯ ದಿನಾಂಕ : 04-05-2017

ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Karnataka High Court Recruitment of Candidates to the Post of Assistant Court Secretaries
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X