ಕೆಪಿಎಸ್‌ಸಿ ಗ್ರೂಪ್‌ ಸಿ ಹುದ್ದೆಗಳ ನೇಮಕಾತಿ

ಪದವಿ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳಿಗೆ ಪೌರಾಡಳಿತ ನಿರ್ದೇಶನಾಲಯ, ಕಾಲೇಜು ಶಿಕ್ಷಣ ಇಲಾಖೆ, ಕೃಷಿ ಮಾರಾಟ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಸ್ಥಾನಗಳಿಗೆ ನೇಮಕಾತಿ.

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 571 ಗ್ರೂಪ್‌ 'ಸಿ' ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು,ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಪದವಿ ಮತ್ತು ಪದವಿ ಪೂರ್ವ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳಿಗೆ ಪೌರಾಡಳಿತ ನಿರ್ದೇಶನಾಲಯ, ಕಾಲೇಜು ಶಿಕ್ಷಣ ಇಲಾಖೆ, ಕೃಷಿ ಮಾರಾಟ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಸ್ಥಾನಗಳಿಗೆ ನೇಮಕಾತಿ ನಡೆಯಲಿದೆ.

ಕೆಪಿಎಸ್‌ಸಿ ನೇಮಕಾತಿ

ಹುದ್ದೆಗಳ ವಿವರ

ಪದವಿ ವಿದ್ಯಾರ್ಹತೆಯುಳ್ಳ ಹುದ್ದೆಗಳು: 149

ಪದವಿ ಪೂರ್ವ ವಿದ್ಯಾರ್ಹತೆಯುಳ್ಳ ಹುದ್ದೆಗಳು: 422

ಒಟ್ಟು ಹುದ್ದೆ: 571

ವಯೋಮಿತಿ

ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.

ವಿದ್ಯಾರ್ಹತೆ

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಪದವಿ ಸೇರಿದಂತೆ ಹುದ್ದೆಗಳ ಅನುಸಾರ ವಿದ್ಯಾರ್ಹತೆ ನಿಗದಿಯಾಗಿದೆ.

ಅರ್ಜಿ ಪ್ರಕ್ರಿಯೆ

  • ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಅವರುಗಳ ಆಧಾರ್ ಕಾರ್ಡ್ ಸಂಖ್ಯೆಯನ್ನು ತಪ್ಪದೇ ಅರ್ಜಿಯಲ್ಲಿ ಭರ್ತಿ ಮಾಡತಕ್ಕದ್ದು, ಆಧಾರ್ ಕಾರ್ಡ್‍ನ್ನು ಮಾಡಿಸದೆ ಇರುವ ಅಭ್ಯರ್ಥಿಗಳು ಈ ಅಧಿಸೂಚನೆಯನ್ನು ಹೊರಡಿಸಿದ ತಕ್ಷಣ ಆಧಾರ್ ಕಾರ್ಡನ್ನು ಮಾಡಿಸಿ, ಅರ್ಜಿಯಲ್ಲಿ ತಪ್ಪದೇ ನಮೂದಿಸತಕ್ಕದ್ದು.
  • ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ, ಅರ್ಜಿಸಲ್ಲಿಸುವಾಗ ಹುದ್ದೆಗಳನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸತಕ್ಕದ್ದು, ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೂ ಎಲ್ಲಾ ಹುದ್ದೆಗಳಿಗೂ ಸೇರಿ ಒಂದೇ ಅರ್ಜಿಯನ್ನು ಸಲ್ಲಿಸತಕ್ಕದ್ದು ಹಾಗೂ ಒಂದೇ ಶುಲ್ಕವನ್ನು ಪಾವತಿಸ ತಕ್ಕದ್ದು.
  • ಯಾವುದೇ ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಬಾರಿ ಅರ್ಜಿ ಸಲ್ಲಿಸಿದಲ್ಲಿ, ಆಧಾರ್ ಸಂಖ್ಯೆಯುಳ ಅರ್ಜಿಯನ್ನು ಪರಿಗಣಿಸಿ ಉಳಿದಂತಹ ಅರ್ಜಿಗಳನ್ನು ಯಾವುದೇ ಮುನ್ಸೂಚನೆಯಿಲ್ಲದೇ ತಿರಸ್ಕರಿಸಲಾಗುವುದು. ಅರ್ಜಿಗಳನ್ನು ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
  • ಅಭ್ಯರ್ಥಿಗಳು ಆನ್-ಲೈನ್ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಓದಿಕೊಳ್ಳತಕ್ಕದು ಹಾಗೂ ನೀಡಿರುವ ಸೂಚನೆಗಳನ್ವಯವೇ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸುವುದಲ್ಲದೇ ಅಂತಹವರ ವಿರುದ್ಧ ಆಯೋಗವು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳುವುದು.

ಪರೀಕ್ಷಾ ವಿಧಾನ

ಪರೀಕ್ಷೆಯು ಸಾಮಾನ್ಯ ಜ್ಞಾನ ಮತ್ತು ಸಂವಹನ ವಿಷಯಗಳ ಎರಡು ಪತ್ರಿಕೆಗಳನ್ನು ಹೊಂದಿದ್ದು 200 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ ಮುಂದಿನ ಹಂತದ ಪ್ರಕ್ರಿಯೆ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-03-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2017 (ರಾತ್ರಿ 11-45 ಘಂಟೆಯೊಳಗೆ)
  • ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-04-2017

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹300, ಒಬಿಸಿ ಅಭ್ಯರ್ಥಿಗಳು ₹150 ಶುಲ್ಕವನ್ನು ಯಾವುದೇ ಇ-ಪಾವತಿ ಅಂಚೆ ಕಚೇರಿಯಲ್ಲಿ ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 17-04-2017 (ಅಂಚೆ ಕಛೇರಿಯ ಕಾರ್ಯದ ವೇಳೆಯೊಳಗೆ ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಗೆ ರಾತ್ರಿ 11.45 ಗಂಟೆಯೊಳಗೆ).

ವೆಬ್‌ಸೈಟ್‌: www.kpsc.kar.nic.in

For Quick Alerts
ALLOW NOTIFICATIONS  
For Daily Alerts

English summary
kpsc recruitment notification for group c non technical posts in various department
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X