ಪೊಲೀಸ್ ಇಲಾಖೆಯಲ್ಲಿ ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಒಟ್ಟು 12 ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 16, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆ ನೇಮಕಾತಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 12 ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 16, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆ ವಿವರ

ಡಿಟೆಕ್ಟೀವ್ ಸಬ್‍ಇನ್ಸ್ಪೆಕ್ಟರ್ ಪುರುಷ- 10
ಮಹಿಳಾಡಿಟೆಕ್ಟೀವ್ ಸಬ್‍ಇನ್ಸ್ಪೆಕ್ಟರ್ - 01
ಡಿಟೆಕ್ಟೀವ್ ಸಬ್‍ಇನ್ಸ್ಪೆಕ್ಟರ್ (ಹೈದರಾಬಾದ್ ಕರ್ನಾಟಕ)-01
ಒಟ್ಟು = 12

ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ

ವಯೋಮಿತಿ

  • ಅರ್ಜಿ ಸಲ್ಲಿಸುವ ದಿನಾಂಕದಂದು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ 28 ವರ್ಷ ಮೀರಿರಬಾರದು.
  • ಎಸ್ಸಿ, ಎಸ್ಟಿ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.

ವಿದ್ಯಾರ್ಹತೆ

ಡಿಟೆಕ್ಟಿವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಕಾನೂನಿನಲ್ಲಿ ಪದವಿ ಅಥವಾ ಎಐಸಿಟಿಇ ಯಿಂದ ಮಾನ್ಯತೆ ಪಡೆದ ಇಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್‍ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.inನಲ್ಲಿ ಆನ್-ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು , ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.250/-
  • ಎಸ್.ಸಿ/ಎಸ್.ಟಿ/ಪ್ರ-1ರ ಅಭ್ಯರ್ಥಿಗಳಿಗೆ ರೂ.100/-
  • ಆರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ / ಅಂಚೆ ಕಛೇರಿಯಲ್ಲಿ ಮಾತ್ರ ಪಾವತಿಸತಕ್ಕದ್ದು.

ಸೂಚನೆ

  • ಆಭ್ಯರ್ಥಿಯೂ ಅರ್ಜಿಯನ್ನು ಭರ್ತಿ ಮಾಡಿ ಚಲನ್‍ಅನ್ನು ಸೃಜಿಸಿ ಸಂಭಂದಪಟ್ಟ ಬ್ಯಾಂಕ್ / ಅಂಚೆ ಕಛೇರಿಯಲ್ಲಿ ಶುಲ್ಕವನ್ನು ಪಾವತಿಸಬೇಕು.
  • ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಒಂದೇ ಹುದ್ದೆಗೆ ಸಲ್ಲಿಸಿದ್ದಲ್ಲಿ , ಒಂದೇ ಅರ್ಜಿಯನ್ನು(ಅಂತಿಮವಾಗಿ ಸಲ್ಲಿಸಿದ) ಮಾತ್ರ ಪರಿಗಣಿಸಲಾಗುವುದು.
  • ಸಹಿಷ್ಣುತೆ ಮತ್ತು ದೇಹಧಾಢ್ರ್ಯತೆ ಪರೀಕ್ಷೆಯಲ್ಲಿ ಆರ್ಹಗೊಂಡ ಅಭ್ಯರ್ಥಿಗಳಿಗೆ ಎಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿಯೇ ಲಿಖಿತ ಪರೀಕ್ಷೆ ನಡೆಸಲಾಗುವುದು.

ಆಯ್ಕೆ ವಿಧಾನ

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆ, ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30.06.2017 ಬೆಳಿಗ್ಗೆ 10.00 ಗಂಟೆಗೆ
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16.07.2017 ಸಂಜೆ 06.00 ಗಂಟೆಗೆ
• ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ:18.07.2017

ಆನ್-ಲೈನ್ ಮೂಲಕ ಅರ್ಜಿ ಭರ್ತಿಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

For Quick Alerts
ALLOW NOTIFICATIONS  
For Daily Alerts

English summary
Karnataka State Police released new notification on their official website for the recruitment for Detective Sub Inspector (Men & Women). Job seekers should apply from 30th June 2017 and before 16th July 2017.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X