ಉತ್ತರ ಕನ್ನಡ ಜಿಲ್ಲೆ: ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಾಗಿ ಸೃಜಿಸಲಾದ, ಮುಂಬಡ್ತಿ, ಘಟಕೀಯ ವರ್ಗಾವಣೆ, ವಯೋನಿವೃತ್ತಿಯಿಂದ ತೆರವಾದ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆನ್-ಲೈನ್ ಮೂಲಕ ಆಹ್ವಾನಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕು ಕಚೇರಿಗಳಲ್ಲಿ ಹಾಗೂ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೊಸದಾಗಿ ಸೃಜಿಸಲಾದ, ಮುಂಬಡ್ತಿ, ಘಟಕೀಯ ವರ್ಗಾವಣೆ, ವಯೋನಿವೃತ್ತಿಯಿಂದ ತೆರವಾದ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆನ್-ಲೈನ್ ಮೂಲಕ ಆಹ್ವಾನಿಸಲಾಗಿದೆ.

ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ

ಗ್ರಾಮ ಲೆಕ್ಕಿಗ: 15 ಹುದ್ದೆಗಳು
ವೇತನ ಶ್ರೇಣಿ: ರೂ.11600-21000/-

ಶೈಕ್ಷಣಿಕ ವಿದ್ಯಾರ್ಹತೆ

ಕರ್ನಾಟಕ ಪಿಯು ಬೋರ್ಡ್ ನಡೆಸುವ ಪಿಯುಸಿ ಪರೀಕ್ಷೆ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ದೂರ ಶಿಕ್ಷಣದ ಮೂಲಕ ಪಿಯುಸಿ ಅಥವಾ ಸಮಾನಂತರ ವಿದ್ಯಾರ್ಹತೆ ಹೊಂದಿರುವವರು ಅರ್ಹರಿರುವುದಿಲ್ಲ.

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷಗಳು. (ಒಬಿಸಿ ವರ್ಗದವರಿಗೆ ಮೂರು ವರ್ಷ ಮತ್ತು ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ಇದೆ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-(ಬ್ಯಾಂಕ್ ಶುಲ್ಕ ಹೊರತು ಪಡಿಸಿ)
  • ಎಸ್.ಸಿ/ಎಸ್.ಟಿ/ಪ್ರ-1/ಮಹಿಳಾ ಅಭ್ಯರ್ತಿಗಳಿಗೆ ರೂ ರೂ.100/-(ಬ್ಯಾಂಕ್ ಶುಲ್ಕ ಹೊರತು ಪಡಿಸಿ)

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ಪಿಯುಸಿ ಅಥವಾ ಸಿಬಿಎಸ್ಇ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 15-07-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2017

ಹೆಚ್ಚಿನ ಮಾಹಿತಿಗಾಗಿ karwar-va.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
Online applications are invited from the eligible candidates to the village accountant posts in UttaraKannada district.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X