ನೀಟ್-2017: 23 ಹೆಚ್ಚುವರಿ ನಗರಗಳಲ್ಲಿ ಪರೀಕ್ಷೆ

ಈ ಬಾರಿ ದೇಶಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಒಂದೇ ಪರೀಕ್ಷೆಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸಲಾಗಿದೆ.

ನೀಟ್-2017 ಪರೀಕ್ಷೆ ಸಂಬಂಧ ಹೆಚ್ಚುವರಿ ಪರೀಕ್ಷಾ ಕೇಂದ್ರಗಳಿಗೆ ಹೊಸದಾಗಿ 23 ನಗರಗಳನ್ನು ಸೇರಿಸಲಾಗಿದೆ. ಈ ಮೂಲಕ ಒಟ್ಟು 103 ನಗರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಈ ಹಿಂದೆ 80 ನಗರಗಳ 1500 ಪರೀಕ್ಷಾ ಕೆಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿತ್ತು. ಈ ಬಾರಿ ದೇಶಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಒಂದೇ ಪರೀಕ್ಷೆಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು ಪರೀಕ್ಷಾ ಸಂಖ್ಯೆಗಳನ್ನು ಹೆಚ್ಚಿಸಲಾಗಿದೆ.

23 ಹೆಚ್ಚುವರಿ ನಗರಗಳಲ್ಲಿ ಪರೀಕ್ಷೆ

ಭಾರತೀಯ ವೈದ್ಯಕೀಯ ಪರಿಷತ್ (ಎಂ.ಸಿ.ಐ) ಮತ್ತು ಭಾರತೀಯ ದಂತ ವೈದ್ಯಕೀಯ ಪರಿಷತ್ (ಡಿ.ಸಿ.ಐ) ಅನುಮೋದನೆಯೊಂದಿಗೆ ನಡೆಯುತ್ತಿರುವ ದೇಶದ ಎಲ್ಲಾ ಸರ್ಕಾರಿ, ಖಾಸಗಿ, ಡೀಮ್ಡ್ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳ ಪ್ರವೇಶ ಮೇ 07 ರಂದು ಏಕಕಾಲಕ್ಕೆ ದೇಶಾದ್ಯಂತ 103 ನಗರಗಳ 2200 ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ನಡೆಯಲಿದೆ. ಒಟ್ಟು 11,35,104 ವಿದ್ಯಾರ್ಥಿಗಳು ಬರೆಯಲಿದ್ದಾರೆ.

ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಗುಲ್ಬರ್ಗ ಮತ್ತು ಬೆಳಗಾವಿ ನಗರಗಳಿಗೆ ಮಾತ್ರ ನೀಟ್ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ಹೆಚ್ಚುವರಿ ನಾಲಕ್ಕು ನಗರಗಳನ್ನು ನೀಡಲಾಗಿದೆ. ಒಟ್ಟು ಕರ್ನಾಟಕದ ಎಂಟು ನಗರಗಳಲ್ಲಿ ಪರೀಕ್ಷೆ ನಡೆಯಲಿದೆ.

ಕರ್ನಾಟಕದಲ್ಲಿರುವ ಪರೀಕ್ಷಾ ಕೇಂದ್ರಗಳು

  • ಬೆಂಗಳೂರು
  • ಬೆಳಗಾವಿ
  • ಗುಲ್ಬರ್ಗ
  • ಮಂಗಳೂರು
  • ಹುಬ್ಬಳ್ಳಿ
  • ಮೈಸೂರು
  • ದಾವಣಗೆರೆ
  • ಉಡುಪಿ

ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಲು ನಾಲ್ಕು ದಿನಗಳ ಅವಕಾಶ ನೀಡಲಾಗಿದೆ. ದಿನಾಂಕ 24-03-2017 ರಿಂದ ದಿನಾಂಕ 27-03-2017 ರವರೆಗೂ ವಿದ್ಯಾರ್ಥಿಗಳು ಸಿಬಿಎಸ್ಇ ನೀಟ್ ಅಧಿಕೃತ ವೆಬ್ಸೈಟ್ ಮೂಲಕ ಲಾಗಿನ್ ಆಗಿ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷಾ ವಿವರ

  • ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕನ್ನಡ, ಇಂಗ್ಲಿಷ್, ತಮಿಳು, ತೆಲುಗು ಸೇರಿದಂತೆ ದೇಶದ ಒಟ್ಟು 10 ಭಾಷೆಗಳಲ್ಲಿ ನೀಡಲಾಗುತ್ತದೆ.
  • ಈ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು 3 ಬಾರಿ ಅವಕಾಶ ನೀಡಲಾಗಿದ್ದು ಈಗಾಗಲೇ 3 ಬಾರಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
  • ದಿನಾಂಕ 07-05-2017 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.
  • ಪ್ರತಿ ಪತ್ರಿಕೆಯು ಒಟ್ಟು 180 ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷಾ ವಿಷಯಗಳು ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ (ಬಾಟನಿ ಮತ್ತು ಜಿಯೋಲಾಜಿ) ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳನ್ನ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಹಿಂದಿ ಮತ್ತು ಕನ್ನಡಲ್ಲಿ ಪ್ರಶ್ನೆ ಪತ್ರಿಕೆ ಇರುತ್ತದೆ.

ನೀಟ್ ವೆಬ್ಸೈಟ್ ವಿಳಾಸ: www.cbseneet.nic.in

For Quick Alerts
ALLOW NOTIFICATIONS  
For Daily Alerts

English summary
Government of India has desired to increase 23 more new examination cities in the list of 80 existing examination cities. Accordingly, following 23 new cities have been added in NEET-2017
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X