ಸಿಬಿಎಸ್ಇ ಎನ್ಇಟಿ ಕೀ ಉತ್ತರಗಳು ಪ್ರಕಟ

ಜನವರಿಯಲ್ಲಿ ನಡೆದಿದ್ದ ಸಿಬಿಎಸ್ಇ ಎನ್ಇಟಿ ಕೀ ಉತ್ತರಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಪಡೆಯಬಹುದಾಗಿದೆ.

ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಆಯ್ಕೆಗೆ ಮಾನದಂಡವಾಗಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್)ಯ ಕೀ ಉತ್ತರಗಳು ಪ್ರಕಟವಾಗಿದೆ.

ಜನವರಿಯಲ್ಲಿ ನಡೆದಿದ್ದ ಸಿಬಿಎಸ್ಇ ಎನ್ಇಟಿ ಕೀ ಉತ್ತರಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಪಡೆಯಬಹುದಾಗಿದೆ.

ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಎನ್ಇಟಿ ಪರೀಕ್ಷೆಗಳನ್ನು ನಡೆಸಲಾಗುತಿತ್ತು ಆದರೆ ಈ ಬಾರಿಯ ಎನ್ಇಟಿ ಪರೀಕ್ಷೆಯನ್ನು ಜನವರಿಯಲ್ಲಿ ನಡೆಸಲಾಯಿತು. ಈ ಬಾರಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ 7.94 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು.

ಸೂಚನೆ

ಉತ್ತರಗಳಿಗೆ ಸಂಬಂಧಪಟ್ಟಂತೆ ಏನಾದರು ಆಕ್ಷೇಪಣೆಗಳಿದ್ದರೆ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಎನ್ಇಟಿ ಕೀ ಉತ್ತರಗಳು ಪ್ರಕಟ

ಕೀ ಉತ್ತರಗಳನ್ನು ಪಡೆಯುವ ವಿಧಾನ

  • ಸಿಬಿಎಸ್ಇ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ
  • ಕೀ ಉತ್ತರಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ
  • ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಿ

ಸೂಚನೆ: ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಕೊನೆಯ ದಿನಾಂಕ 08-05-2017

ಎನ್ಇಟಿ ಪರೀಕ್ಷಾ ವಿಧಾನ

ಎನ್ಇಟಿ ಪರೀಕ್ಷೆಯು ಒಟ್ಟು ಮೂರು ಪತ್ರಿಕೆಗಳನ್ನು ಒಳಗೊಂಡಿದ್ದು 350 ಅಂಕಗಳಿಗೆ ನಡೆಸಲಾಗುವುದು.

  • ಮೊದಲ ಪತ್ರಿಕೆ 60 ಪ್ರಶ್ನೆಗಳನ್ನೊಳಗೊಂಡಿದ್ದು 50 ಪ್ರಶ್ನೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ. ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಈ ಪತ್ರಿಕೆಯು ಸಾಮಾನ್ಯ ಪತ್ರಿಕೆಯಾಗಿದ್ದು ಲಾಜಿಕ್, ರೀಸನಿಂಗ್, ಮೆಂಟಲ್ ಎಬಿಲಿಟಿ ಸೇರಿದಂತೆ ಹತ್ತು ವಿವಿಧ ವಿಷಯಗಳ ಬಗ್ಗೆ ಕೇಳಲಾಗುವುದು.
  • ಎರಡನೇ ಪತ್ರಿಕೆಯು 50 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
  • ಮೂರನೇ ಪತ್ರಿಕೆಯು 75 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.

ತೇರ್ಗಡೆ ವಿಧಾನ

ಯುಜಿಸಿ ನಿಯಮಾವಳಿಯಂತೆ ಶೇಕಡವಾರಿನ (ಕಟ್ ಆಫ್ ಪರ್ಸೆಂಟೇಜ್) ಮೂಲಕ ಅಭ್ಯರ್ಥಿಗಳ ಫಲಿತಾಂಶ ಘೋಷಿಸಲಾಗುತ್ತದೆ.

ಹೆಚ್ಚಿನ ವಿವರಗಳಿಗಾಗಿ cbsenet.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
The answer keys for National Eligibility Test (UGC NET) 2017 released by The Central Board of Secondary Education (CBSE).
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X