ಜಿಇಇ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

ಜೆ ಇ ಇ ಮುಖ್ಯ ಪರೀಕ್ಷೆಯ ಫಲಿತಾಂಶ ನಿರೀಕ್ಷಿಸಿದ ದಿನದಂತೆ ಪ್ರಕಟಗೊಂಡಿದೆ. ಜೆ ಇ ಇ ಪರೀಕ್ಷಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಜೆ ಇ ಇ ಮುಖ್ಯ ಪರೀಕ್ಷೆಯ ಫಲಿತಾಂಶ ನಿರೀಕ್ಷಿಸಿದ ದಿನದಂತೆ ಪ್ರಕಟಗೊಂಡಿದೆ. ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ(ಸಿಬಿಎಸ್ಇ) ಜೆಇಇ ಫಲಿತಾಂಶ ಪ್ರಕಟಿಸಿದ್ದು, ಪರೀಕ್ಷಾ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ವಿಳಾಸದಲ್ಲಿ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಬಾರಿಯ ಐದನೇ ಮುಖ್ಯ ಪರೀಕ್ಷೆಯು ಇದಾಗಿದ್ದು ಏಪ್ರಿಲ್ ತಿಂಗಳಿನಲ್ಲಿ ನಡೆದಿತ್ತು. ಏಪ್ರಿಲ್ 02 , 2017 ರಂದು ಲಿಖಿತ ಪರೀಕ್ಷೆ ಏಪ್ರಿಲ್ 08 , 2017 ಆನ್-ಲೈನ್ ಪರೀಕ್ಷೆ ಗಳು ನಡೆದಿದ್ದವು.

ವಿದ್ಯಾರ್ಥಿಗಳ ಹಾಜರಾತಿ

ದೇಶದಾದ್ಯಂತ ನಡೆದಿದ್ದ ಈ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 12 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.
ಹುಡುಗರು: 8,62,526,
ಹುಡುಗಿಯರು:3,36,460.
ಒಟ್ಟು : 11, 98,986

ಜೆಇಇ ಫಲಿತಾಂಶ ಪ್ರಕಟ

ಪ್ರವೇಶ ಪತ್ರ ಪಡೆಯುವ ವಿಧಾನ

  • ಜಿಇಇ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ jeemain.nic.in ಭೇಟಿ ನೀಡಿ
  • ಮುಖ್ಯ ಪುಟದಲ್ಲಿ ಕಾಣುವ ರಿಸಲ್ಟ್ ಬಟನ್ ಕ್ಲಿಕ್ ಮಾಡಿ
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
  • ಫಲಿತಾಂಶ ಡೌನ್ಲೋಡ್ ಮಾಡಿಕೊಳ್ಳಿ

ಜೆಇಇ

ಜೆ ಇ ಇ ಪರೀಕ್ಷೆಗಳು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ ಮತ್ತು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿ ಬಿ ಎಸ್ ಇ ), ನವದೆಹಲಿ, ಸಹಯೋಗದೊಂದಿಗೆ ಆಯೋಜಿಸುವ ಜಂಟಿ ಪ್ರವೇಶ ಪರೀಕ್ಷೆ. ವೃತ್ತಿಪರ ಕೋರ್ಸುಗಳಿಗೆ ಸೇರುವ ವಿದ್ಯಾರ್ಥಿಗಳಲ್ಲಿ ಒತ್ತಡ ಕಡಿಮೆಮಾಡಲು ಹಾಗು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಮಟ್ಟದ ಸಾಧನೆ ಮಾಡಲು ಬಯಸುವವರಿಗೆ ಜೆ ಇ ಇ ಪರೀಕ್ಷೆಗಳು ಸಹಕಾರಿಯಾಗಿವೆ.

ಜೆ.ಇ.ಇ. ಪರೀಕ್ಷೆಗಳು ರಾಷ್ಟ್ರ ಮಟ್ಟದ ತಾಂತ್ರಿಕ ವಿದ್ಯಾಸಂಸ್ಥೆಗಳಿಗೆ ಪ್ರವೇಶವನ್ನು ಪಡೆಯಲು ತೆಗೆದುಕೊಳ್ಳಬೇಕಾದಂಥವು. ಐ.ಐ.ಟಿ., ಎನ್.ಐ.ಟಿ., ಐ.ಎಸ್.ಇ.ಆರ್., ಮುಂತಾದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಶುದ್ಧ ವಿಜ್ಞಾನವನ್ನೋ ಅಥವಾ ಅನ್ವಯ ವಿಜ್ಞಾನವನ್ನೋ ಅಧ್ಯಯನ ಮಾಡಲು ಜೆ.ಇ.ಇ. ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆಯಬೇಕು. ಜೆ.ಇ.ಇ. ಆಯ್ಕೆ ಪರೀಕ್ಷೆಗಳು ತಮ್ಮದೇ ಆದ ಪಠ್ಯವನ್ನು ಆಧರಿಸಿರುತ್ತವೆ.

For Quick Alerts
ALLOW NOTIFICATIONS  
For Daily Alerts

English summary
The results of the Joint Entrance Exam (JEE) Main 2017 has been released by the Central Board of Secondary Education (CBSE) today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X