ವಿವಿ ಗುಣಮಟ್ಟ ರ್ಯಾಂಕಿಂಗ್: ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳೇ ಬೆಸ್ಟ್!

ಐ ಕೇರ್ ರೇಟಿಂಗ್ ಸಮೀಕ್ಷೆ ಪ್ರಕಾರ ರಾಜ್ಯದ 38 ವಿಶ್ವವಿದ್ಯಾಲಯಗಳಲ್ಲಿ ಖಾಸಗಿ ಮತ್ತು ಡೀಮ್ಡ್ ವಿವಿಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು ಸರ್ಕಾರಿ ವಿವಿಗಳು ಹಿಂದುಳಿದಿವೆ.

ದೇಶದಲ್ಲಿರುವ ವಿಶ್ವವಿದ್ಯಾಲಯಗಳ ಗುಣಮಟ್ಟದ ಸಮೀಕ್ಷೆ ಹೊರಬಿದ್ದಿದ್ದು ರಾಜ್ಯದಲ್ಲಿ ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮೇಲುಗೈ ಸಾಧಿಸಿವೆ.

ಐಕೇರ್ (ಇಂಡಿಯನ್ ಸೆಂಟರ್ ಫಾರ್ ಅಕಾಡೆಮಿಕ್ ರ್ಯಾಂಕಿಂಗ್ ಅಂಡ್ ಎಕ್ಸಲೆನ್ಸ್ ಪ್ರೈವೇಟ್ ಲಿಮಿಟೆಡ್) ಸಹಯೋಗದೊಂದಿಗೆ ಇದೇ ಮೊದಲ ಬಾರಿ ದೇಶದಲ್ಲಿರುವ ವಿವಿಗಳ ಗುಣಮಟ್ಟದ ಸಮೀಕ್ಷೆ ನಡೆಸಲಾಗಿದೆ.

ಐಕೇರ್ ಸಮೀಕ್ಷೆಯಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು 'ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಶ್ರೇಯಾಂಕ ಚೌಕಟ್ಟು' (ಕೆಎಸ್‌ಯುಆರ್‌ಎಫ್‌) ಸಿದ್ಧಪಡಿಸಿದೆ. ಅದರಂತೆ ವಿಶ್ವವಿದ್ಯಾಲಯಗಳಿಗೆ ನೀಡಲಾದ ಅಂಕಗಳ ಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಶುಕ್ರವಾರ ಬಿಡುಗಡೆ ಮಾಡಿದರು.

ರಾಜ್ಯದಲ್ಲಿ ಸರ್ಕಾರಿ, ಡೀಮ್ಡ್‌, ಖಾಸಗಿ ಸೇರಿ 52 ವಿಶ್ವವಿದ್ಯಾಲಗಳಿವೆ. ಅದರಲ್ಲಿ 40 ವಿಶ್ವವಿದ್ಯಾಲಯಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. 38 ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಅಂಕಪಟ್ಟಿ ಪ್ರಕಟಿಸಿದ್ದು, ಕರ್ನಾಟಕ ಮತ್ತು ಕುವೆಂಪು ವಿಶ್ವವಿದ್ಯಾಲಯಗಳ ವರದಿ ಇನ್ನಷ್ಟೇ ಸಿದ್ಧವಾಗಬೇಕಿದೆ.

ರಾಜ್ಯದಲ್ಲಿ ಖಾಸಗಿ ವಿಶ್ವವಿದ್ಯಾಲಯಗಳೇ ಬೆಸ್ಟ್!

ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸಂಶೋಧನೆ, ಹೊಸ ಆವಿಷ್ಕಾರಗಳು, ಬೋಧನಾ ಗುಣಮಟ್ಟ ಮತ್ತು ಸಿಬ್ಬಂದಿ ಸಂಖ್ಯೆ, ಮೂಲಸೌಕರ್ಯ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಎಂಬ ವಿಷಯಗಳ ಕುರಿತು ಸಮೀಕ್ಷೆ ನಡೆಸಲಾಗಿದೆ.

ಇದನ್ನು ಗಮನಿಸಿ: ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ

ವಿಶ್ವವಿದ್ಯಾಲಯಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯಗಳ ಗುಣಮಟ್ಟವನ್ನು ಮೌಲ್ಯಮಾಪನ ಮಾಡಿ ಅಂಕ ನೀಡಲಾಗಿದೆ. ಗರಿಷ್ಠ 5 ಸ್ಟಾರ್‌ ಮತ್ತು 1,000 ಅಂಕದ ಮಿತಿಯೊಳಗೆ ಆಯಾ ವಿಶ್ವವಿದ್ಯಾಲಯ ಎಷ್ಟು ಸ್ಟಾರ್‌ ಮತ್ತು ಅಂಕ ಗಳಿಸಿದೆ ಎಂಬುದನ್ನು ವಿವರಿಸಲಾಗಿದೆ.

ಖಾಸಗಿ ವಿ.ವಿಗಳ ಮೇಲುಗೈ

  • 10 ವರ್ಷಕ್ಕಿಂತ ಹಿಂದೆ ಆರಂಭವಾದ ಎಂಟು ವಿಶ್ವವಿದ್ಯಾಲಯಗಳಿದ್ದು, ಮಣಿಪಾಲ್‌ ವಿ.ವಿ 737 ಅಂಕ ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಗುಲ್ಬರ್ಗ ವಿವಿ (557) ಮತ್ತು ಕೊನೆಯ ಸ್ಥಾನದಲ್ಲಿ ಮಂಗಳೂರು ವಿವಿ (428) ಇದೆ.
  • ಐದರಿಂದ ಹತ್ತು ವರ್ಷದೊಳಗೆ ಸ್ಥಾಪನೆಯಾದ ವಿ.ವಿಗಳ ಪಟ್ಟಿಯಲ್ಲಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ವಿಶ್ವವಿದ್ಯಾಲಯ (711) ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಜೈನ್‌ ವಿಶ್ವವಿದ್ಯಾಲಯ (661) ಇದ್ದರೆ, ದಾವಣಗೆರೆ ವಿ.ವಿ ಕೊನೆಯ ಸ್ಥಾನ (279) ಪಡೆದಿದೆ.
  • 5 ವರ್ಷದೊಳಗಿನ ವಿ.ವಿಗಳ ಪಟ್ಟಿಯಲ್ಲಿ ಪಿಇಎಸ್ ವಿಶ್ವವಿದ್ಯಾಲಯ ಪ್ರಥಮ (617) ಮತ್ತು ರೈ ಟೆಕ್ನಾಲಜಿ ವಿ.ವಿ ಕೊನೆಯ (305) ಸ್ಥಾನದಲ್ಲಿದೆ.
  • ವಿಷಯಾಧಾರಿತ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಧಾರವಾಡದ ಕೃಷಿ ವಿ.ವಿ ಪ್ರಥಮ (779), ಬೀದರ್‌ನ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ದ್ವಿತೀಯ (656) ಹಾಗೂ ಜಾನಪದ ವಿಶ್ವವಿದ್ಯಾಲಯ ಕೊನೆ (289) ಸ್ಥಾನದಲ್ಲಿದೆ.

ಹಿಂದುಳಿದ ವಿಷಯಾಧಾರಿತ ವಿವಿಗಳು

  • ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಕನ್ನಡ ವಿಶ್ವವಿದ್ಯಾಲಯ, ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮತ್ತು ಸಂಸ್ಕೃತ ವಿಶ್ವವಿದ್ಯಾಲಯಗಳು ಶೂನ್ಯ ಸಾಧನೆ ಮಾಡಿವೆ.
  • ಮೂಲ ಸೌಕರ್ಯದಲ್ಲೂ ಸಂಸ್ಕೃತ ಮತ್ತು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಗಳು '0' ಸ್ಟಾರ್ ಪಡೆದಿವೆ. ಜಾನಪದ ವಿಶ್ವವಿದ್ಯಾಲಯದ ಬೋಧನೆ ಗುಣಮಟ್ಟ ಮತ್ತು ಆವಿಷ್ಕಾರಕ್ಕೆ ಕೇವಲ 1 ಸ್ಟಾರ್‌ ಬಂದಿದೆ.

ಇದನ್ನು ಗಮನಿಸಿ: ವಿಶ್ವದ ಎಂಟನೇ ಸ್ಥಾನದಲ್ಲಿ ಬೆಂಗಳೂರಿನ ಟಾಟಾ ಇನ್ಸ್ಟಿಟ್ಯೂಟ್

For Quick Alerts
ALLOW NOTIFICATIONS  
For Daily Alerts

English summary
Manipal University has been ranked at the top among established universities (in existence for over a decade) in the inaugural edition of the Karnataka State University Rating Framework (KSURF), which was released by the Karnataka State Higher Education Council (KSHEC) on Friday.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X