ಮೇ 12 ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವು ಮೇ 12ಕ್ಕೆ ಪ್ರಕಟವಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವು ಮೇ 12ಕ್ಕೆ ಪ್ರಕಟವಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಫಲಿತಾಂಶದ ಕ್ರೂಡೀಕರಣ ಮುಗಿದಿದ್ದು ಫಲಿತಾಂಶವನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಗಿದ ನಂತರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಮೇ 10 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ನೀಡುವುದಾಗಿ ಅವರು ತಿಳಿಸಿದ್ದರು. ಆ ನಂತರ ಸರ್ವರ್ ನಿದಾನವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಮೇ 11 ಕ್ಕೆ ನೀಡಲಾಗುವುದು ಎಂದು ಹೇಳಿದ್ದರು. ಆದರೆ ಸೋಮವಾರ ಅವರು ಮೇ 12 ರಂದು ಫಲಿತಾಂಶ ಬರುವುದು ಖಚಿತ ಎಂದು ತಮ್ಮ ಟ್ವೀಟ್ ಖಾತೆ ಮೂಲಕ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ರಿಸಲ್ಟ್

ಮಾರ್ಚ್ 30 ರಿಂದ ಏಪ್ರಿಲ್ 12 ರ ವರೆಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆದಿದ್ದು, ಏಪ್ರಿಲ್ 20 ರಿಂದ ಮೌಲ್ಯಮಾಪನ ಆರಂಭವಾಗಿತ್ತು.

ಈ ಬಾರಿಯ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ರಾಜ್ಯದ 225 ಕಡೆ ಮೌಲ್ಯಮಾಪನ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು, 33 ಶೈಕ್ಷಣಿಕ ಜಿಲ್ಲೆಗಳಲ್ಲಿ ಪ್ರತಿ ವಿಷಯಕ್ಕೆ ಒಂದು ಮೌಲ್ಯಮಾಪನ ಕೇಂದ್ರವನ್ನು ನಿಗದಿಪಡಿಸುವ ಮೂಲಕ ವೇಗವಾಗಿ ಮೌಲ್ಯಮಾಪನ ಕ್ರಿಯೆ ನಡೆಸಲಾಗಿತ್ತು. ಫಲಿತಾಂಶವನ್ನು ಬೇಗ ನೀಡುವ ಉದ್ದೇಶದಿಂದ ಹೆಚ್ಚಿನ ಶಿಕ್ಷಕರನ್ನು ಮೌಲ್ಯಮಾಪನಕ್ಕೆ ಬಳಸಿಕೊಳ್ಳಲಾಗಿದ್ದು, ಇದಕ್ಕಾಗಿ 68,567 ಶಿಕ್ಷಕರನ್ನು ಆಯ್ಕೆ ಮಾಡಲಾಗಿತ್ತು,

ಒಟ್ಟು 2770 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 4.69 ಲಕ್ಷ ಬಾಲಕರು ಹಾಗೂ 4.07 ಲಕ್ಷ ಬಾಲಕಿಯರಿದ್ದಾರೆ. [ಕುತೂಹಲ ಹೆಚ್ಚಿಸಿದ ಪಿಯುಸಿ ಫಲಿತಾಂಶ]

For Quick Alerts
ALLOW NOTIFICATIONS  
For Daily Alerts

English summary
Minister for Primary and secondary education Tanveer sait tweeted SSLC result fixed for May 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X