ಆರ್ ಟಿ ಇ ಅರ್ಜಿ ಸಲ್ಲಿಕೆಗೆ ಏಪ್ರಿಲ್ 15 ಕೊನೆ ದಿನ

ಸಾರ್ವಜನಿಕ ಹಿತದಿಂದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 10-04-2017 ರಿಂದ 15-04-217 ರವರೆಗೆ ವಿಸ್ತರಿಸಲಾಗಿದೆ.

ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್‌ಟಿಇ) ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಇದೇ 15ರವರೆಗೆ ವಿಸ್ತರಿಸಲಾಗಿದೆ.

ಪೋಷಕರು, ವಿದ್ಯಾರ್ಥಿಗಳ ಒತ್ತಾಯದಿಂದ ಆರ್ ಟಿ ಇಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ. ಏಪ್ರಿಲ್ 10 ರವರೆಗೆ ಇದ್ದ ಅವಕಾಶವನ್ನು ಏಪ್ರಿಲ್ 15 ರವರೆಗೂ ವಿಸ್ತರಿಸಲಾಗಿದೆ.

ಎರಡನೇ ಬಾರಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿತ್ತು. ಮೊದಲ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿತ್ತು. ಅರ್ಜಿ ಸ್ವೀಕರಿಸುವ ಗಡುವು ವಿಸ್ತರಿಸುವಂತೆ ಜನಪ್ರತಿನಿಧಿಗಳು, ಪೋಷಕರು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಶಿಕ್ಷಣ ಇಲಾಖೆ ಸ್ಪಂದಿಸಿದ್ದು ಇನ್ನೂ 5 ದಿನ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ನೂತನ ಅಧಿಸೂಚನೆಯಂತೆ 2017-18 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಅಲ್ಪಸಂಖ್ಯಾತವಲ್ಲದ ಅನುದಾನರಹಿತ ಶಾಲೆಗಳಲ್ಲಿ ಪ್ರವೇಶ ಕೋರಿ ಆನ್-ಲೈನ್ ಮೂಲಕ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸ್ವೀಕರಿಸುವ ಕೊನೆಯ ದಿನಾಂಕವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಲಾಗಿದ್ದು ಪೋಷಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಏ.15 ಕೊನೆ ದಿನ

ದಿನಾಂಕ ವಿಸ್ತರಣೆಗೆ ಒತ್ತಾಯ

ಆರ್ ಟಿ ಇ ಅರ್ಜಿ ಸಲ್ಲಿಕೆಗೆ ಮಾರ್ಚ್ 1 ರಿಂದ ಅವಕಾಶವನ್ನು ಕಲ್ಪಿಸಲಾಗಿತ್ತು. ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನವಾಗಿತ್ತು. ಆದರೆ ಇಂಟರ್ನೆಟ್ ಸರ್ವರ್ ಸಮಸ್ಯೆಯಿಂದಾಗಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಕೆ ಸಾಧ್ಯವಾಗಿರಲಿಲ್ಲ. ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಅರ್ಜಿ ಪ್ರಕ್ರಿಯೆಯಲ್ಲಿ ಸಾಕಷಟು ವಿಳಂಭವಾಗಿತ್ತು. ಅರ್ಜಿ ಸಲ್ಲಿಕೆ ವಿಳಂಭವಾಗುತ್ತಿರುವುದರಿಂದ ಪೋಷಕರ ಸಂಘ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ದಿನಾಂಕ ವಿಸ್ತರಿಸಲು ಒತ್ತಾಯಿಸಿತ್ತು.

ಅರ್ಜಿ ಪ್ರಕ್ರಿಯೆ ವಿಳಂಬವಾದ ಕಾರಣ ಕೊನೆಯ ದಿನಾಂಕವನ್ನು ಏಪ್ರಿಲ್ 15 ಕ್ಕೆ ವಿಸ್ತರಿಸುವಂತೆ ಮನವಿ ಸಲ್ಲಿಸಲಾಗಿತ್ತು ಆದರೆ ಇದಕ್ಕೆ ಸ್ಪಂದಿಸಿದ ಶಿಕ್ಷಣ ಇಲಾಖೆ ಏಪ್ರಿಲ್ 10 ರವರೆಗೆ ಮಾತ್ರ ಅವಕಾಶ ಕಲ್ಪಿಸಿತ್ತು. ಆದರೆ ಏಪ್ರಿಲ್ ಹತ್ತರ ನಂತರವೂ ಅವಕಾಶ ನೀಡುವಂತೆ ಶಿಕ್ಷಣ ಇಲಾಖೆಗೆ ಮನವಿಗಳು ಬರುತ್ತಲೇ ಇದ್ದು 15 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಕೆ

  • ಅರ್ಜಿ ಸಲ್ಲಿಸುವಿಕೆ ಪಾಲಕರು ತಮ್ಮ ಕಂಪ್ಯೂಟರ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ.
  • ಬಿಇಒ, ಡಿಡಿಪಿಐ ಕಚೇರಿಗಳಲ್ಲಿ ಉಚಿತವಾಗಿ ಆರ್ ಟಿಇ ಅರ್ಜಿ ಸಲ್ಲಿಸಬಹುದು.
  • ಅರ್ಜಿ ಸಲ್ಲಿಸಲು ಆಧಾರ್ ಸಂಖ್ಯೆ ಮತ್ತು ಪಿನ್ಕೋಡ್ ಮುಖ್ಯವಾಗಿದ್ದು ಆಧಾರ್ ಕಾರ್ಡ್ ಇಲ್ಲವಾದಲ್ಲಿ ಆಧಾರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಸಂಖ್ಯೆ ಪಡೆದು ಸಲ್ಲಿಸಬಹುದು.
  • ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಅಟಲ್ ಜೀ ಕೇಂದ್ರಗಳಲ್ಲಿ 15 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು.

ಸೂಚನೆ

ವಿಳಾಸ ಬದಲಾಗಿದ್ದರು ಅರ್ಜಿ ನೀಡಬಹುದಾಗಿದೆ. ದಾಖಲೆಗಳ ಪರಿಶೀಲನೆ ಪಾಲಕರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಶಾಲೆ ಇರುವ ಬಡಾವಣೆ ಮತ್ತು ವಾಸದ ಬಡಾವಣೆ ಪರೀಕ್ಷಿಸಿಕೊಳ್ಳಬೇಕು. ಕಂದಾಯ ಇಲಾಖೆ, ಆಧಾರ್ ನಂಬರ್ ಸೇರಿ ದಾಖಲೆಗಳು ಅಸಲಿಯಾಗಿದ್ದರೂ ಒಮ್ಮೊಮ್ಮೆ ಕನ್ನಡ ಮತ್ತು ಇಂಗ್ಲಿಷ್ ಅಕ್ಷರಗಳಲ್ಲಿನ ಇನಿಷಿಯಲ್ ಹೊಂದಾಣಿಕೆಯಾಗದೆ ತಿರಸ್ಕಾರವಾಗುವ ಸಾಧ್ಯತೆಗಳಿರುತ್ತವೆ. ಹೀಗಾದಲ್ಲಿ ಆನ್ಲೈನ್ ಮೂಲಕ ದೂರು ಸಲ್ಲಿಸಿದರೆ 48 ಗಂಟೆಗಳ ಒಳಗೆ ಸರಿಪಡಿಸಲಾಗುವುದು. ಇದರ ಜೊತೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳಲ್ಲಿನ ಬಡಾವಣೆಗಳು ಆಧಾರ್ ನಿಂದ ಕೈಬಿಟ್ಟಿದ್ದರೆ ಅಂಥವುಗಳ ಮಾಹಿತಿಯನ್ನು ಶಿಕ್ಷಣ ಇಲಾಖೆಗೆ ಸೇರಿಸುವ ಕ್ರಮ ಕೈಗೊಳ್ಳಲಾಗಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ www.schooleducation.kar.nic.in ಭೇಟಿ ನೀಡಿ.

For Quick Alerts
ALLOW NOTIFICATIONS  
For Daily Alerts

English summary
Department of public instruction has extended the RTE online application date to 15rh April
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X