ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ ಪ.ಜಾ/ಪ.ವರ್ಗ ಅಭ್ಯರ್ಥಿಗಳು ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

By Kavya

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ಇಂಜನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ,2ಬಿ,3ಎ,3ಬಿ ಪ.ಜಾ/ಪ.ವರ್ಗ ಅಭ್ಯರ್ಥಿಗಳು ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಅಹ್ವಾನ

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯದ ಮಿತಿ:

  • ಪ್ರವರ್ಗ-1, ಪ.ಜಾ/ಪ.ವರ್ಗ ಅಭ್ಯರ್ಥಿಗಳಿಗೆ: ರೂ.2.50 ಲಕ್ಷ
  • ಹಿಂದುಳಿದ ವರ್ಗ ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ.1.00 ಲಕ್ಷ

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸದ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-08-2019

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ಸಂಪೂರ್ಣ ವಿವರಗಳಿಗೆ ಇಲಾಖೆಯ ವೆಬ್ಸೈಟ್ ಗಮನಿಸಿ

ಸಹಾಯವಾಣಿ: 080-8050370006

ಆನ್-ಲೈನ್ ಅರ್ಜಿ ವೇಳೆ ಸಲ್ಲಿಸಬೇಕಾದ ದಾಖಲೆಗಳು:

  • ತಹಶೀಲ್ದಾರ/ಉಪತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ವಿದ್ಯಾಭ್ಯಾಸಕ್ಕಾಗಿ ಪಡೆದದಿರುವುದು)
  • ಶಾಲಾ ಕಾಲೆಜುಗಳಿಂದ ಪಡೆದ ವರ್ಗಾವಣೆ ಪತ್ರ
  • ಆಧಾರ್ ಕಾರ್ಡ್ ಅಥವಾ ಇ.ಐಡಿ ನಂಬರ್ ಪ್ರತಿ
  • ಎಸ್ ಎಸ್ ಎಲ್ ಸಿ ಅಂಕಪಟ್ಟಿ ಮತ್ತು ಹಿಂದಿನ ತರಗತಿ/ಕೋರ್ಸುಗಳ ಅಂಕಪಟ್ಟಿ
  • ಬ್ಯಾಂಕ್ ಪಾಸ್ ಬುಕ್ ಮೊದಲ ಪುಟದ ವಿವರಗಳ ಪ್ರತಿ
  • ವಿದ್ಯಾರ್ಥಿಯ ಪಾಸ್ ಪೋರ್ಟ್ ಅಳತೆಯ ಫೋಟೋ
  • ವಾಸಸ್ಥಳ ದೃಢೀಕರಣ ಪತ್ರ.

ವಿದ್ಯಾರ್ಥಿಯು ಆನ್‍ಲೈನ್ ಅರ್ಜಿಯ ಪ್ರತಿ ಹಾಗೂ ಅಪ್‍ಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ , ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ದಿನಾಂಕ 22.08.2019 ರೊಳಗೆ ಕಡ್ಡಾಯವಾಗಿ ಸಲ್ಲಿಸಿ, ಸ್ವೀಕೃತಿ ಪಡೆಯತಕ್ಕದ್ದು. ಒಂದು ವೇಳೆ ನಿಗದಿತ ದಿನಾಂಕದೊಳಗೆ ದಾಖಲಾತಿಗಳನ್ನು ಸಲ್ಲಿಸದಿದ್ದಲ್ಲಿ, ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು.

ವಿದ್ಯಾರ್ಥಿನಿಲಯಗಳಿಗೆ, ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ:

  1. ಅರ್ಹವಿರುವ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ತಾಲ್ಲೂಕಿನ ಹೆಚ್ಚಿನ ಭಾಗ ಪ್ರತಿನಿಧಿಸುವ ವಿಧಾನಸಭಾ ಸದಸ್ಯರು ಅಧ್ಯಕ್ಷರಾಗಿರುವ ಸಮಿತಿಯ ಮೂಲಕ ನಡೆಯುತ್ತದೆ.
  2. ವಿದ್ಯಾರ್ಥಿನಿಲಯದಲ್ಲಿ ಪ್ರವರ್ಗವಾರು, ಕೋರ್ಸುವಾರು ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಹಾಗೂ ಅಂಕಗಳ ಆಧಾರದ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
  3. ಆಯಾ ಜಿಲ್ಲೆಯ ಸ್ಥಳೀಯ ವಿದ್ಯಾರ್ಥಿಗಳಿಗೆ ಮೊದಲನೆ ಆದ್ಯತೆಯನ್ನು ನೀಡಲಾಗುವುದು.
  4. ಒಂದು ವೇಳೆ ವಿದ್ಯಾರ್ಥಿಯ ಅಂಕಗಳು ಸಮನಾಗಿದ್ದರೆ, ವಿದ್ಯಾರ್ಥಿಯ ಸ್ವಂತ ಸ್ಥಳದ ದೂರವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
  5. ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ಅರ್ಹವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ದೊರಕದಿದ್ದಲ್ಲಿ, ಅರ್ಹತೆ ಆಧಾರದ ಮೇಲೆ ಹಾಗೂ ಅನುದಾನದ ಲಭ್ಯತೆಗೊಳಪಟ್ಟು ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಪರಿಗಣಿಸಲಾಗುವುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಗೆ ಇ-ಮೇಲ್ ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಅಗತ್ಯ ದಾಖಲೆಯೊಂದಿಗೆ ಸಂಪರ್ಕಿಸಲು ಸೂಚಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Department of backwardclasses welfare invites online application from the students who are studying in engineering, medial and other professional courses for hostels admissions
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X