Adarsha Vidyalaya Admission 2022-23 : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2022-23ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 26,2022ರ ವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.

 
ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಸ್ತುತ (2022-23ನೇ ಸಾಲಿನಲ್ಲಿ) 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 24/1/2022 ರಿಂದ 9/2/2022ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ತದನಂತರ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಫೆಬ್ರವರಿ 26ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ತಮ್ಮ ಪಾಲಕರು/ಪೋಷಕರು ಕೆಳಗೆ ನಮೂದಿಸಿರುವ ದಾಖಲಾತಿಯೊಂದಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು :

* ಎಸ್.ಟಿ.ಎಸ್.ನಂಬರ್ (SATS Number)
* ಮಗುವಿನ ಭಾವಚಿತ್ರ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ನಕಲು
* ಆಧಾರ್ ಕಾರ್ಡ್

ಆದರ್ಶ ವಿದ್ಯಾಲಯ :

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.

2022-23ನೇ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು

ಪ್ರವೆಶ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯುವ ದಿನಾಂಕ: ಶೀಘ್ರದಲ್ಲಿ ಪ್ರಕಟಿಸಲಾಗುವುದು

ಅರ್ಜಿ ಸಲ್ಲಿಸುವ ದಿನಾಂಕ: ದಿನಾಂಕ: 24/1/2022 ರಿಂದ 26/2/2022ರವರೆಗೆ

 

ಪ್ರವೇಶ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮಕ್ಕಳು ಯಾವುದೇ ಶುಲ್ಕ ಪಾವತಿಸಬೇಕಾಗಿರುವುದಿಲ್ಲ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/ ಗೆ ಭೇಟಿ ನೀಡಿ.

For Quick Alerts
ALLOW NOTIFICATIONS  
For Daily Alerts

English summary
Adarsha vidyalaya 2022-23 admission notification has been released. Application date extended, students can apply through online before Feb 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X