ಸಿನಿಮಾಟೋಗ್ರಫಿ ಮತ್ತು ಸೌಂಡ್ ಇಂಜಿನಿಯರ್ ಡಿಪ್ಲೊಮಾಗೆ ಪ್ರವೇಶ

Posted By:

ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಿಂದ 2017-18 ಸಾಲಿನ ಡಿಪ್ಲೊಮಾ ಸಿನಿಮಾಟೋಗ್ರಫಿ ಮತ್ತು ಸೌಂಡ್ ರೆಕಾರ್ಡಿಂಗ್ ಅಂಡ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಖಾಲಿ ಉಳಿದ ಸೀಟುಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್ ಎಸ್ ಎಲ್ ಸಿ ಪಾಸ್ ಆದ ಮತ್ತು ರಾಜ್ಯದಲ್ಲಿ ಕನಿಷ್ಠ 5 ವರ್ಷ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 02-08-2017 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು. 

ಸಿನಿಮಾಟೋಗ್ರಫಿ ಡಿಪ್ಲೊಮಾಗೆ ಪ್ರವೇಶ

ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಂಡು ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 02-08-2017 ರ ಸಂಜೆ 5.30 ರೊಳಗೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಮತ್ತು ಒಂದು ಸೆಟ್ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿಗಳ ಸಹಿತ ಹಾಗೂ ಇತ್ತೀಚಿನ 04 ಪಾಸ್ ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.100/-
  • ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ ರೂ.50/-

ಶುಲ್ಕವನ್ನು ರಾಜ್ಯದ ಯಾವುದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗಳಲ್ಲಿ ಚಲನ್ ಪಡೆದು ಸಲ್ಲಿಸುವುದು.

ಸಂದರ್ಶನದ ವೇಳೆ ಸಲ್ಲಿಸಬೇಕಾದ ದಾಖಲೆಗಳು

  • ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿನ ಮೂಲ ಅಂಕಪಟ್ಟಿ
  • ಮೂಲ ವರ್ಗಾವಣೆ ಪ್ರಮಾಣ ಪತ್ರ
  • ಕರ್ನಾಟಕದಲ್ಲಿ ಕನಿಷ್ಠ 05 ವರ್ಷ ವ್ಯಾಸಂಗ ಮಾಡಿದ ಬಗ್ಗೆ ವ್ಯಾಸಂಗ ದೃಢೀಕರಣ ಪ್ರಮಾಣ ಪತ್ರ.
  • ಜಾತಿ ಪ್ರಮಾಣ ಪತ್ರ
  • ವೈದ್ಯಕೀಯ ಪ್ರಮಾಣ ಪತ್ರ
  • ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ನಾಲ್ಕು ಭಾವಚಿತ್ರಗಳು

English summary
GOVT FILM & TELEVISION TECHNICAL INSTITUTE, BANGALORE INVITES APPLICATION TO SSLC PASSED CANDIDATES FOR DIPLOMA IN CINEMATOGRAPHY AND SOUND ENGINEERING COURSE.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia