ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಪ್ಯಾರಾ ಮೆಡಿಕಲ್ ಕೋರ್ಸ್

Posted By:

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18 ನೇ ಸಾಲಿನ ಶೈಕ್ಷಣಿಕಕ ವರ್ಷಕ್ಕೆ ರಾಜ್ಯದ 750 ಪರಿಶಿಷ್ಟ ಜಾತಿಯ ಮತ್ತು 250 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅರೆ ವೈದ್ಯಕೀಯ (ಪ್ಯಾರಾ ಮೆಡಿಕಲ್) ಕೋರ್ಸ್ ಆಯ್ಕೆ ಮಾಡಿಕೊಳ್ಳಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ಯಾರಾ ಮೆಡಿಕಲ್ ಕೋರ್ಸ್ ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖಾವತಿಯಿಂದ ಉಚಿತವಾಗಿ ವಿದ್ಯಾಭ್ಯಾಸವನ್ನು ನೀಡಲು ಇಲಾಖೆ ತೀರ್ಮಾನಿಸಿದೆ.

ಉಚಿತ ಪ್ಯಾರಾ ಮೆಡಿಕಲ್ ಕೋರ್ಸ್

ಕೋರ್ಸ್ ವಿವರ

ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬರೇಟರಿ ಟೆಕ್ನಾಲಜಿ
ಡಿಪ್ಲೊಮಾ ಇನ್ ಎಕ್ಸ್-ರೇ ಟೆಕ್ನಾಲಜಿ
ಡಿಪ್ಲೊಮಾ ಇನ್ ಆಪರೇಷನ್ ಥಿಯೇಟರ್ ಟೆಕ್ನಾಲಜಿ
ಡಿಪ್ಲೊಮಾ ಇನ್ ಡೆಂಟಲ್ ಮೆಕಾನಿಕ್ಸ್
ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ

ವಿದ್ಯಾರ್ಹತೆ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಈ ಕೋರ್ಸ್ 3 ವರ್ಷ ಅವಧಿಯದಾಗಿರುತ್ತದೆ.
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದವರಿಗೆ ಈ ಕೋರ್ಸ್ ನ ಅವಧಿ ಎರಡು ವರ್ಷಗಳಾಗಿರುತ್ತದೆ.

ಅರ್ಹತೆ

  • ಅಭ್ಯರ್ಥಿಯು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಕರ್ನಾಟಕದ ನಾಗರೀಕನಾಗಿರಬೇಕು
  • ಅಭ್ಯರ್ಥಿಯು 1 ರಿಂದ 10 ನೇ ತರಗತಿ ಅಥವಾ ಪಿಯುಸಿ ವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು
  • ಕನಿಷ್ಠ 15-40 ವರ್ಷದೊಳಗಿರಬೇಕು
  • ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನ ರೂ.2.50 ಲಕ್ಷದೊಳಗಿರಬೇಕು
  • ಅಂಗವಿಕಲ ಅಭ್ಯರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪಡೆದ ವೈದ್ಯಕೀಯ ದೃಢೀಕರಣ ಪತ್ರವನ್ನು ಅರ್ಜಿ ಸಲ್ಲಿಸುವ ಮುಂಚಿತವಾಗಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2017

ಆಯ್ಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆಯಾ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ಕೋರ್ಸ್ ನಲ್ಲಇ ಮತ್ತು ಕಾಲೇಜಿನಲ್ಲಿ ಲಭ್ಯವಿರುವ ಸೀಟುಗಳಿಗನುಗುಣವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ವಿವರಗಳಿಗಾಗಿ web5.kar.nic.in ಗಮನಿಸಿ

English summary
GOVERNMENT OF KARNATAKA SOCIAL WELFARE DEPARTMENT invites Application for Admission to Para-Medical Courses for SC/ST Candidates for the year- 2017-18

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia