ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪದವಿ ಪ್ರವೇಶ ಪ್ರಕ್ರಿಯೆ ಪ್ರಾರಂಭ

ಬಿ.ಎಸ್ಸಿ ಭೌತವಿಜ್ಞಾನ, ಜೀವವಿಜ್ಞಾನ ಮತ್ತು ಬಿ.ಎ ಅರ್ಥಶಾಸ್ತ್ರ, ಮಾನವಿಕ ವಿಷಯಕ್ಕೆ ಪ್ರವೇಶ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯವು 2018 ನೇ ಸಾಲಿನ ಪದವಿ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

ಬಿ.ಎಸ್ಸಿ ಭೌತವಿಜ್ಞಾನ, ಜೀವವಿಜ್ಞಾನ ಮತ್ತು ಬಿ.ಎ ಅರ್ಥಶಾಸ್ತ್ರ, ಮಾನವಿಕ ವಿಷಯಕ್ಕೆ ಪ್ರವೇಶ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ಹಾಗು ವಿದ್ಯಾರ್ಥಿವೇತನದ ಸೌಲಭ್ಯಗಳು ಸಿಗಲಿವೆ.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ: ಪದವಿ ಪ್ರವೇಶಾತಿ

ಅರ್ಹತೆ

ಭಾರತ ಸರ್ಕಾರದ ಯಾವುದೇ ಶಿಕ್ಷಣ ಮಂಡಳಿಯಿಂದ ಪಿಯುಸಿ ಅಥವಾ ಹನ್ನೆರಡನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ಕರ್ನಾಟಕದ ಅಭ್ಯರ್ಥಿಗಳಿಗೆ ಶೇ.25 ಸೀಟುಗಳು ಮೀಸಲಿರಲಿದೆ.

ಅರ್ಜಿ ಸಲ್ಲಿಕೆ

ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್ಸೈಟ್ ನಲ್ಲಿ ತಮ್ಮ ಇ-ಮೇಲ್ ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ನೋಂದಣಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಎರಡು ರೀತಿಯ ಪ್ರವೇಶ ನಡೆಯಲಿದ್ದು, ಆರಂಭದ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್‌ 5 ಕೊನೇ ದಿನ. ಅದೇ ತಿಂಗಳು 17ರಂದು ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಸೇರಿ ಕೆಲ ನಗರಗಳಲ್ಲಿ ನಡೆಸಲಾಗುತ್ತದೆ. ಸಂದರ್ಶನ ಮತ್ತು ನೋಂದಣಿಯು 2018ರ ಜನವರಿಯಲ್ಲಿ ನಡೆಯುತ್ತದೆ.

ಸಾಮಾನ್ಯ ಪ್ರವೇಶ ಪ್ರಕ್ರಿಯೆಯು 2018ರ ಏಪ್ರಿಲ್‌ನಲ್ಲಿ ನಡೆಯಲಿದೆ. ಪ್ರವೇಶ ಪರೀಕ್ಷೆ ಮತ್ತು ಸಂದರ್ಶನವು ಮೇನಲ್ಲಿ ನಡೆಯುತ್ತದೆ.

ಅರ್ಜಿ ಸಲ್ಲಿಕೆ ಮತ್ತು ಹೆಚ್ಚಿನ ಮಾಹಿತಿಗಾಗಿ www.azimpremjiuniversity.edu.in ಗಮನಿಸಿ

ಸಂಪರ್ಕಕ್ಕೆ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಪಿಕ್ಸೆಲ್ ಪಾರ್ಕ್, ಬಿ ಬ್ಲಾಕ್, ಪಿಇಎಸ್ ಕ್ಯಾಂಪಸ್, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ರಸ್ತೆ. ಸಹಾಯವಾಣಿ: 1800 843 2001. ಇ-ಮೇಲ್: [email protected].

For Quick Alerts
ALLOW NOTIFICATIONS  
For Daily Alerts

English summary
Azim Premji University invites applications from eligible candidates for UG program 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X