ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೋರ್ಸ್ ಪ್ರವೇಶ ಪ್ರಕ್ರಿಯೆ ಪ್ರಾರಂಭ

Posted By:

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣ, ಸೆಂಟ್ರಲ್‌ ಕಾಲೇಜು, ಕೋಲಾರ-ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ 2017-18ನೇ ಸಾಲಿನ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕಲಾ ನಿಕಾಯ, ವಿಜ್ಞಾನ ನಿಕಾಯ, ವಾಣಿಜ್ಯ ವಿಭಾಗ, ಶಿಕ್ಷಣ ನಿಕಾಯ, ಕಾನೂನು ನಿಕಾಯ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ದಿನಾಂಕ 05-07-2017 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪ್ರತಿ ಕೋರ್ಸ್‌ಗೂ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ, ಅರ್ಹತೆ, ಶುಲ್ಕದ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ ಪ್ರವೇಶಾತಿ

ಅರ್ಜಿ ಶುಲ್ಕ

 • ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹200
 • ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳು ₹100
 • ಶುಲ್ಕವನ್ನು ಆನ್‌ಲೈನ್ ಅಥವಾ ನೇರವಾಗಿ ಪಾವತಿಸಬಹುದು. ರಸೀದಿಯನ್ನು ಭರ್ತಿ ಮಾಡಿದ ಅರ್ಜಿಯ ಜೊತೆ ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಗಳ ಜೊತೆ ಸೀಟುಗಳ ಕೋರಿಕೆಗೆ ಬೇಕಾಗಿರುವ ದಾಖಲೆಗಳನ್ನು ಲಗತ್ತಿಸಿ, ನೇರವಾಗಿ ಆಯಾ ವಿಭಾಗದ ಮುಖ್ಯಸ್ಥರಿಗೆ ನೀಡಬಹುದು ಅಥವಾ ಅಂಚೆ ಮೂಲಕ ಕಳುಹಿಸಬಹುದು. ವಿಭಾಗಗಳ ವಿಳಾಸ ವಿವಿ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಕೋಲಾರ-ರಾಮನಗರ ಸ್ನಾತಕೋತ್ತರ ಕೇಂದ್ರಗಳಲ್ಲಿ ಹಾಗೂ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ನಡೆಸುವ ಕೋರ್ಸುಗಳಿಗೆ ಅರ್ಜಿ ಸಲ್ಲಿಸುವರು ಆಯಾ ವಿಷಯಗಳ ವಿಭಾಗದ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಬೇಕು.

'ಸ್ನಾತಕೋತ್ತರ ಪದವಿಗಳಾದ ಆಡಿಯೋಲಜಿ, ಸ್ಪೀಚ್ ಲಾಂಗ್ವೇಜ್ ಪೆಥಾಲಜಿ ಹಾಗೂ ಆಡಿಯೋಲಜಿ ಅಂಡ್ ಸ್ಪೀಚ್ ಲಾಂಗ್ವೇಜ್ ಪೆಥಾಲಜಿ ಕೋರ್ಸುಗಳಿಗೆ ಅರ್ಜಿ ಭರ್ತಿ ಮಾಡಿದವರು ವಿಜ್ಞಾನ, ಗಣಿತ ವಿಭಾಗದ ಡೀನ್‌ ಅವರಿಗೆ ಸಲ್ಲಿಸಬೇಕು' ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ www.bangaloreuniversity.ac.in ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು

 • ಅಂತರ್ಜಾಲ ಮೂಲಕ ಅರ್ಜಿ ಪಡೆಯುವ ಪ್ರಾರಂಭದ ದಿನಾಂಕ: 22-06-2017
 • ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ: 05-07-2017
 • ರೂ.200/- ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-07-2017
 • ಜೇಷ್ಠತಾ ಪಟ್ಟಿ ಪ್ರಕಟಿಸುವ ದಿನಾಂಕ: 17-07-2017
 • ಜೇಷ್ಠತಾ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-07-2017
 • ಅಂತಿಮ ಜೇಷ್ಠತಾ ಪಟ್ಟಿ ಪ್ರಕಟಿಸುವ ದಿನಾಂಕ: 21-07-2017
 • ಕಲಾ, ವಾಣಿಜ್ಯ ಮತ್ತು ಶಿಕ್ಷಣ ವಿಭಾಗಗಳಿಗೆ ಪ್ರವೇಶ ಪ್ರಕ್ರಿಯೆ ದಿನಾಂಕಗಳು: 24-07-2017, 25-07-2017, 26-07-2017
 • ವಿಜ್ಞಾನ ವಿಷಯಗಳಿಗೆ ಪ್ರವೇಶ ಪ್ರಕ್ರಿಯೆ ದಿನಾಂಕಗಳು: 27-07-2017, 28-07-2017
 • ಪ್ರಥಮ ಸೆಮಿಸ್ಟರ್ ತರಗತಿಗಳು ಪ್ರಾರಂಭವಾಗುವ ದಿನಾಂಕ: 02-08-2017

ಇದನ್ನು ಗಮನಿಸಿ: ಬೆಂಗಳೂರು ಎನ್ ಎಸ್ ಡಿ ಸರ್ಟಿಫಿಕೇಷನ್ ಕೋರ್ಸ್ ಅರ್ಜಿ ಆಹ್ವಾನ

English summary
Bangalore university invites applications for admission to the PG courses at Jnanabharathi & central college campuses, P.G centers at Kolar, Ramanagara and affiliated colleges for the academic year 2017-18

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia