Bengaluru City University Admission 2021 : ಬೆಂಗಳೂರು ವಿಶ್ವವಿದ್ಯಾಲಯ ಪ್ರವೇಶಾತಿಗೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಆವರಣ, ಸೆಂಟ್ರಲ್‌ ಕಾಲೇಜು, ಕೋಲಾರ-ರಾಮನಗರ ಸ್ನಾತಕೋತ್ತರ ಕೇಂದ್ರ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಸಾಲಿಗೆ ಸಾಲಿನ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಕೂಡ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ವಿವಿ ಪ್ರವೇಶಾತಿ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕಲಾ ನಿಕಾಯ, ವಿಜ್ಞಾನ ನಿಕಾಯ, ವಾಣಿಜ್ಯ ವಿಭಾಗ, ಶಿಕ್ಷಣ ನಿಕಾಯ, ಕಾನೂನು ನಿಕಾಯ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ದಿನಾಂಕ ಅಕ್ಟೋಬರ್ 16,2021ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಪರಿಷ್ಕೃತ ಪ್ರವೇಶಾತಿ ವೇಳಾಪಟ್ಟಿ :

ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ: 16-10-2021
ರೂ.100/- ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-10-2021

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದ ಅಭ್ಯರ್ಥಿಗಳು 200/-ರೂ
ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ರಸೀದಿಯನ್ನು ಭರ್ತಿ ಮಾಡಿದ ಅರ್ಜಿಯ ಜೊತೆ ಲಗತ್ತಿಸಬೇಕು.

ಅರ್ಜಿ ಸಲ್ಲಿಕೆ :

ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಒಂದು ಮುದ್ರಿತ ಪ್ರತಿಯನ್ನು ಅಗತ್ಯವಿರುವ ಪೂರಕ ದಾಖಲೆಗಳೊಂದಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮುಖಾಂತರ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ವಿಳಾಸ - ಅಧ್ಯಕ್ಷರು, ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಕಳುಹಿಸಲು ತಿಳಿಸಲಾಗಿದೆ.

ಪ್ರತಿ ಕೋರ್ಸ್‌ಗೂ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ, ಅರ್ಹತೆ, ಶುಲ್ಕದ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ನೋಡಬಹುದಾಗಿದೆ. ಪದವಿಯ ಅಂತಿಮ ಫಲಿತಾಂಶ ಕಾಯುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ, ಸೀಟ್ ಮ್ಯಾಟ್ರಿಕ್ಸ್‌ ಮತ್ತು ಕೋರ್ಸ್‌ಗಳ ಶುಲ್ಕದ ಮಾಹಿತಿ ಮತ್ತು ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಬೆಂಗಳೂರು ಸಿಟಿ ವಿವಿ ವೆಬ್‌ಸೈಟ್‌ http://bcu.ac.in ಗೆ ಸಂಪರ್ಕಿಸಲು ಕೋರಲಾಗಿದೆ.

ಕೋಲಾರ-ರಾಮನಗರ ಸ್ನಾತಕೋತ್ತರ ಕೇಂದ್ರಗಳಲ್ಲಿ ಹಾಗೂ ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜುಗಳಲ್ಲಿ ನಡೆಸುವ ಕೋರ್ಸುಗಳಿಗೆ ಅರ್ಜಿ ಸಲ್ಲಿಸುವವರು ಆಯಾ ವಿಷಯಗಳ ವಿಭಾಗದ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಬೇಕು.

ಸ್ನಾತಕೋತ್ತರ ಪದವಿಗಳಾದ ಆಡಿಯೋಲಜಿ, ಸ್ಪೀಚ್ ಲಾಂಗ್ವೇಜ್ ಪೆಥಾಲಜಿ ಹಾಗೂ ಆಡಿಯೋಲಜಿ ಅಂಡ್ ಸ್ಪೀಚ್ ಲಾಂಗ್ವೇಜ್ ಪೆಥಾಲಜಿ ಕೋರ್ಸುಗಳಿಗೆ ಅರ್ಜಿ ಭರ್ತಿ ಮಾಡಿದವರು ವಿಜ್ಞಾನ, ಗಣಿತ ವಿಭಾಗದ ಡೀನ್‌ ಅವರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ : https://universitysolutions.in/pgadm2020/bcupg/login.html

For Quick Alerts
ALLOW NOTIFICATIONS  
For Daily Alerts

English summary
Bengaluru city university admission 2021 : Application last date extended and revised dates are here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X