ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬೀದರ ವ್ಯಾಪ್ತಿಯಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ 2 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಿನ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ.

ವಿದ್ಯಾರ್ಹತೆ ಏನಿರಬೇಕು?:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕಡ್ಡಾಯವಾಗಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.
ವಯೋಮಿತಿ:
ಸೆಪ್ಟೆಂಬರ್ 10,2020ರ ಅನ್ವಯ ಗರಿಷ್ಟ 20 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬೋಧನಾ ಮಾಧ್ಯಮ:
ಪಶುಸಂಗೋಪನಾ ಡಿಪ್ಲೋಮಾದ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ನಡೆಸಲಾಗುವುದು.
ಶಿಷ್ಯ ವೇತನ:
ಪ್ರವೇಶ ಪಡೆದ ಎಲ್ಲಾ ಅಭ್ಯರ್ಥಿಗಳಿಗೆ 1,000/-ರೂಗಳ ಮಾಸಿಕ ಶಿಷ್ಯ ವೇತನವನ್ನು ವ್ಯಾಸಂಗ ಅವಧಿಯಲ್ಲಿ ನಿಯಮಾನುಸಾರ ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು 400/-ರೂ ಮತ್ತು ಪ.ಜಾ/ಪ.ಪ. ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಹಣಕಾಸು ನಿಯಂತ್ರಣಾಧಿಕಾರಿಗಳು, ಕಪಪಮೀವಿವಿ,ಬೀದರ ಇವರ ಹೆಸರಿನಲ್ಲಿ ಡಿ.ಡಿ ತೆಗೆಯಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ: ಸೆಪ್ಟೆಂಬರ್ 2,2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 10,2020
ಅರ್ಜಿ ಸಲ್ಲಿಕೆ:
ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ http://www.kvafsu.edu.in/ ಗೆ ಭೇಟಿ ನೀಡಿ ಪಡೆಯಬಹುದು. ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಡಿ.ಡಿಯನ್ನು ಲಗತ್ತಿಸಿ ಅಕ್ಟೋಬರ್ 10,2020ರೊಳಗಾಗಿ "ಕುಲಸಚಿವರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ, ಅಂಚೆ ಪೆಟ್ಟಿಗೆ ಸಂ. 6, ಬೀದರ - 585 226" ಇವರ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಒಂದು ವೇಳೆ ಅರ್ಜಿ ಸಲ್ಲಿಸಿ, ಡಿ,ಡಿ ಶುಲ್ಕ ಪಾವತಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
.
ಪಶುಸಂಗೋಪನೆ ಡಿಪ್ಲೋಮಾ ಕೋರ್ಸ್ ನ ಪ್ರವೇಶಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ