Diploma Admission 2021-22 : ಪಶುಸಂಗೋಪನೆ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬೀದರ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ 2 ವರ್ಷ ಅವಧಿಯ ಡಿಪ್ಲೋಮಾ ಕೋರ್ಸಿನ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಲಾಗಿದೆ.

2021-22ನೇ ಸಾಲಿನ ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ ಏನಿರಬೇಕು?:

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ / ತತ್ಸಮಾನ ಪರೀಕ್ಷೆಯೊಂದಿಗೆ ಕನ್ನಡವನ್ನು ಒಂದು ವಿಷಯವಾಗಿ ಕಡ್ಡಾಯವಾಗಿ ಓದಿ ಕನಿಷ್ಠ ಶೇಕಡ 45 ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳು ಶೇಕಡ.40 ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು) ಮತ್ತು ಕಡ್ಡಾಯವಾಗಿ 1 ರಿಂದ 10ನೇ ತರಗತಿಯವರೆಗೆ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು.

ಖಾಲಿ ಸೀಟುಗಳ ವಿವರ :

2021-22ನೇ ಸಾಲಿನ ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

ವಯೋಮಿತಿ:

ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 12,2021ರ ಅನ್ವಯ ಗರಿಷ್ಟ 20 ವರ್ಷ ವಯೋಮಿತಿಯೊಳಗಿರಬೇಕು.

ಬೋಧನಾ ಮಾಧ್ಯಮ:

ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ನ ತರಗತಿಗಳನ್ನು ಕನ್ನಡ ಮಾಧ್ಯಮದಲ್ಲಿ ನಡೆಸಲಾಗುವುದು.

ಶಿ‍ಷ್ಯ ವೇತನ:

ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ಗೆ ಪ್ರವೇಶ ಪಡೆದ ಎಲ್ಲಾ ಅಭ್ಯರ್ಥಿಗಳಿಗೆ 1,000/-ರೂಗಳ ಮಾಸಿಕ ಶಿಷ್ಯ ವೇತನವನ್ನು ವ್ಯಾಸಂಗ ಅವಧಿಯಲ್ಲಿ ನಿಯಮಾನುಸಾರ ನೀಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳು 400/-ರೂ ಮತ್ತು ಪ.ಜಾ/ಪ.ಪ. ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಹಣಕಾಸು ನಿಯಂತ್ರಣಾಧಿಕಾರಿಗಳು, ಕಪಪಮೀವಿವಿ,ಬೀದರ ಇವರ ಹೆಸರಿನಲ್ಲಿ ಡಿ.ಡಿ ತೆಗೆಯಬೇಕು.

2021-22ನೇ ಸಾಲಿನ ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ: ಸೆಪ್ಟೆಂಬರ್ 3,2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 12,2021

ಅರ್ಜಿ ಸಲ್ಲಿಕೆ:

ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ http://www.kvafsu.edu.in/ ಗೆ ಭೇಟಿ ನೀಡಿ ಪಡೆಯಬಹುದು. ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಡಿ.ಡಿಯನ್ನು ಲಗತ್ತಿಸಿ ಅಕ್ಟೋಬರ್ 12,2021ರೊಳಗಾಗಿ "ಕುಲಸಚಿವರು, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ, ಅಂಚೆ ಪೆಟ್ಟಿಗೆ ಸಂ. 6, ಬೀದರ - 585 226" ಇವರ ಕಚೇರಿಗೆ ಅರ್ಜಿಯನ್ನು ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಒಂದು ವೇಳೆ ಅರ್ಜಿ ಸಲ್ಲಿಸಿ, ಡಿ,ಡಿ ಶುಲ್ಕ ಪಾವತಿಸದಿದ್ದಲ್ಲಿ, ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪಶುಸಂಗೋಪನಾ ಡಿಪ್ಲೋಮಾ ಕೋರ್ಸ್ ನ ಪ್ರವೇಶಾತಿ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Karnataka veterinary animal and fisheries sciences university invites application for diploma course. Apply before Oct 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X