ಉಳಿಕೆ ಎಂಜಿನಿಯರಿಂಗ್ ಸೀಟು ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಹಂಚಿಕೆ

ಡಿಪ್ಲೊಮಾ ಕೋಟಾದ ಸೀಟು ಹಂಚಿಕೆಯ ನಂತರ ಉಳಿದಿರುವ ಎಂಜಿನಿಯರಿಂಗ್ ಸೀಟುಗಳನ್ನು ಬಿ.ಎಸ್ಸಿ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

2017-18 ನೇ ಸಾಲಿನ ಉಳಿದ ಇಂಜಿನಿಯರಿಂಗ್ ಸೀಟುಗಳ ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಡಿಪ್ಲೊಮಾ ಕೋಟಾದ ಸೀಟು ಹಂಚಿಕೆಯ ನಂತರ ಉಳಿದಿರುವ ಎಂಜಿನಿಯರಿಂಗ್ ಸೀಟುಗಳನ್ನು ಬಿ.ಎಸ್ಸಿ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬಿ.ಎಸ್ಸಿ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಪ್ರವೇಶ

ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗೆ ಪ್ರವೇಶ ಪಡೆಯಲಿದ್ದಾರೆ.

ವಿದ್ಯಾರ್ಹತೆ

  • ಪ್ರಸಕ್ತ ಸಾಲಿನಲ್ಲಿ ಉಳಿದಿರುವ ಇಂಜಿನಿಯರಿಂಗ್ ಸೀಟುಗಳಿಗೆ ಈ ವರ್ಷದ ಬಿಎಸ್ಸಿ ಎರಡನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್‌ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಅಭ್ಯರ್ಥಿಗಳು ದ್ವಿತೀಯ ಪಿಯುಸಿ (ವಿಜ್ಞಾನ) ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.
  • ಪದವಿಯಲ್ಲಿ ಗಣಿತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡಿರಬೇಕು.
  • ಮೊದಲ ವರ್ಷದ ಬಿಎಸ್ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕ ಪಡೆದಿರಬೇಕು (ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಶೇ.40)

ಅರ್ಜಿ ಸಲ್ಲಿಕೆ

ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಿಂದ ಅರ್ಜಿಗಳನ್ನು ಪಡೆದು ಸಲ್ಲಿಸಲು ಸೂಚಿಸಲಾಗಿದೆ.

ಪ್ರಾಧಿಕಾರದ ವೆಬ್ಸೈಟ್ ಗೆ ಭೇಟಿ ನೀಡಿ ಇದೇ 30ರೊಳಗೆ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಸಲ್ಲಿಸಬೇಕು.

ದಿನಾಂಕ 31-10-2017 ರಂದು ದಾಖಲಾತಿಗಳ ಪರಿಶೀಲನೆ ನಡೆಸಲಾಗುತ್ತದೆ. ಅದೇ ದಿನ ಸೀಟು ಹಂಚಿಕೆಯನ್ನೂ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ kea.kar.nic.in ಗಮನಿಸಿ

For Quick Alerts
ALLOW NOTIFICATIONS  
For Daily Alerts

English summary
KARNATAKA EXAMINATIONS AUTHORITY ADMISSION TO 2nd YEAR / 3rd SEMESTER ENGINEERING COURSES FOR B.Sc CANDADIATES - 2017-18
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X