
ಹಾವೇರಿ ಜಿಲ್ಲೆಯ 14 ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳೇನಿರಬೇಕು ?:
* ವಿದ್ಯಾರ್ಥಿಯು ಸರ್ಕಾರದ ಅಥವಾ ಅಂಗೀಕೃತ ಶಾಲೆಗಳಲ್ಲಿ 5ನೇ ತರಗತಿ ಉತ್ತೀರ್ಣರಾಗಿರಬೇಕು.
* ವಿದ್ಯಾರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖ್, ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿರಬೇಕು.
* ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.
* ಅಲ್ಪಸಂಖ್ಯಾತರ ವರ್ಗಗಳಿಗೆ ಶೇ.75 ರಷ್ಟು ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಶೇ.25 ರಷ್ಟು ಮೀಸಲಾತಿ ಲಭ್ಯವಿದೆ.
ಅರ್ಜಿ ಸಲ್ಲಿಸುವುದು ಹೇಗೆ ?:
ಆಸಕ್ತ ವಿದ್ಯಾರ್ಥಿಗಳು ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಸಂಬಂಧಪಟ್ಟ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಜಾತಿ, ಆದಾಯ ಪ್ರಮಾಣ ಪತ್ರದ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜುಲೈ 6,2021ರೊಳಗೆ ಸಲ್ಲಿಸಬೇಕು.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾವೇರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ, ಬ್ಯಾಡಗಿ, ಹಾನಗಲ್, ರಾಣೇಬೆನ್ನೂರು, ಹಿರೇಕೆರೂರು, ಶಿಗ್ಗಾಂವ, ಸವಣೂರು ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು.


Click it and Unblock the Notifications











