ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿದತ ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ 2020-21 ನೇ ಸಾಲಿಗೆ ಪ್ರಥಮ ಡಿಪ್ಲೊಮಾ ಪ್ರವೇಶಾತಿಯನ್ನು "ನಾನ್ ಇಂಟರಾಕ್ಟಿವ್ ಪ್ರವೇಶ ಪ್ರಕ್ರಿಯೆ" (ಆನ್ಲೈನ್ ಎಂಟ್ರಿ) ಮೂಲಕ ನಡೆಸುವ ಕುರಿತಂತೆ ಪೂರ್ಣಾವಧಿಯ ಡಿಪ್ಲೊಮಾ ಇಂಜಿನಿಯರಿಂಗ್ ಮತ್ತು ನಾನ್ ಇಂಜಿನಿಯರಿಂಗ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.
ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ತಾಂತ್ರಿಕ ಶಿಕ್ಷಣ ಇಲಾಖೆಯ ವತಿಯಿಂದ ನಾನ್ ಇಂಟರಾಕ್ಟಿವ್ ಕೌನ್ಸಿಲಿಂಗ್ ಮುಖಾಂತರ ಅಭ್ಯರ್ಥಿಯು ಸ್ವ-ಇಚ್ಛೆಯಿಂದ ರಾಜ್ಯದ ಯಾವುದೇ ಸರ್ಕಾರಿ/ಅನುದಾನಿತ/ಖಾಸಗಿ ಪಾಲಿಟೆಕ್ನಿಕ್ ಮತ್ತು ಕೋರ್ಸನ್ನು ಆಯ್ಕೆ ಮಾಡಿಕೊಳ್ಳುಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ
ಇಂಜಿನಿಯರಿಂಗ್ ಕೋರ್ಸುಗಳಿಗೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ನಾನ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಕಮರ್ಷಿಯಲ್ ಪ್ರಾಕ್ಟಿಸ್ ಮತ್ತು ಅಪೇರಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳಿಗೆ:
ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ದ್ವಿತೀಯ ಪಿಯುಸಿಗೆ ಸಮಾನವಾದ ಕೋರ್ಸುಗಳ ಪ್ರವೇಶಕ್ಕೆ ಇರಬೇಕಾದ ಕನಿಷ್ಠ ವಿದ್ಯಾರ್ಹತೆ ಕರ್ನಾಟಕ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ:
ಪ್ರಥಮ ಡಿಪ್ಲೊಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ದಿನಾಂಕ 6-08-2020 ರಿಂದ 22-08-2020 ರವರೆಗೆ ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಮೂಲಕ ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡುಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.