ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) 2019ರ ಜುಲೈ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಈ ಮೊದಲು ವಿಶ್ವವಿದ್ಯಾನಿಲಯವು ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 14 ಎಂದು ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ.ಜುಲೈ ನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮುಂದಿನ ವರ್ಷ ಅಂದರೆ ಜೂನ್‌ನಲ್ಲಿ ತಮ್ಮ ಮೊದಲ ಪರೀಕ್ಷೆಗೆ ಹಾಜರಾಗುತ್ತಾರೆ.
ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ.
ಅಭ್ಯರ್ಥಿಗಳಿಗೆ ಅನುಕೂಲಕರವಾಗುವಂತೆ ವಿಶ್ವವಿದ್ಯಾಲಯವು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಎರಡು ಸರ್ವರ್‌ಗಳ ಲಿಂಕ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಪಾವತಿಸಲು ಸರ್ವರ್-Iರ ಲಿಂಕ್ ಅನ್ನು ಬಳಸಬಹುದು. ಹೊಸದಾಗಿ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಸರ್ವರ್ -II ಲಿಂಕ್ ಅನ್ನು ಬಳಸಬಹುದು.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.