ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2021ರ ಜುಲೈ ಅವಧಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಮುಂಚೆ ನವೆಂಬರ್ 22,2021ರ ವರೆಗೆ ಕಾಲವಕಾಶ ನೀಡಲಾಗಿತ್ತು, ಆದರೆ ತದನಂತರ ನವೆಂಬರ್ 30ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಡಿಸೆಂಬರ್ 7,2021ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
"ಇಗ್ನೋ ಜುಲೈ-2021 ಸೆಷನ್ ನಲ್ಲಿ ಯುಜಿ ಮತ್ತು ಪಿಜಿ ಕೋರ್ಸ್ ಗಳಿಗೆ ಮಾತ್ರ (ಸೆಮಿಸ್ಟರ್ ಆಧಾರಿತ ಕಾರ್ಯಕ್ರಮಗಳನ್ನು ಹೊರತುಪಡಿಸಿ) ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಡಿಸೆಂಬರ್ 7,2021 ರವರೆಗೆ ವಿಸ್ತರಿಸಿದೆ. ಪ್ರಮಾಣಪತ್ರ / ಡಿಪ್ಲೋಮಾ ಮತ್ತು ಪಿಜಿ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆಯನ್ನು ಮುಚ್ಚಲಾಗಿದೆ. " ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ.
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.
ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.
IGNOU ಜುಲೈ 2021 ಸೆಷನ್ : ಅರ್ಜಿ ಸಲ್ಲಿಸುವುದು ಹೇಗೆ ?
ಸ್ಟೆಪ್ 1: ಅಧಿಕೃತ ವೆಬ್‌ಸೈಟ್ ignou.samarth.edu.in ಅಥವಾ ignou.ac.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಿಗದಿತ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಅಂತಿಮವಾಗಿ ಪರಿಶೀಲಿಸಿಕೊಂಡು ಸಬ್‌ಮಿಟ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-12-2021
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://ignou.ac.in/


Click it and Unblock the Notifications











