IGNOU Admission 2021 : ಜುಲೈ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ನ.12ರ ವರೆಗೆ ವಿಸ್ತರಣೆ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2021ರ ಜುಲೈ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ನವೆಂಬರ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಇಗ್ನೋ ಪ್ರವೇಶಾತಿ : ಜುಲೈ ಸೆಶನ್ ಗೆ ಅರ್ಜಿ ಸಲ್ಲಿಕೆಯ ಅವಧಿ ನ.12ರ ವರೆಗೆ ವಿಸ್ತರಣೆ

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ.

ಪದವಿ ಮತ್ತು ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ (ಪ್ರಮಾಣಪತ್ರ ಮತ್ತು ಸೆಮಿಸ್ಟರ್ ಆಧಾರಿತ ಕಾರ್ಯಕ್ರಮಗಳನ್ನು ಹೊರತುಪಡಿಸಿ) ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ignouadmission.samarth.edu.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ಇದೇ ವೇಳೆ 2022ರ ಜನವರಿ ಸೆಶನ್ ಗೆ ಮರು-ನೋಂದಣಿಯನ್ನು ಸಹ ಇಗ್ನೋ ಪ್ರಾರಂಭಿಸಿದೆ.

ವಿದ್ಯಾರ್ಥಿಗಳು ಪುನಃ ನೋಂದಾಯಿಸಲು ಸಮರ್ಥ ಪೋರ್ಟಲ್ ignou.samarth.edu.in ನಲ್ಲಿ ಲಾಗಿನ್ ಆಗಬೇಕಿರುತ್ತದೆ. ಜನವರಿ ಅಧಿವೇಶನಕ್ಕೆ ಮರು-ನೋಂದಾಯಿಸಲು ಕೊನೆಯ ದಿನಾಂಕ ನವೆಂಬರ್ 30.

ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200 ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಜುಲೈ 2021ರ ಸೆಶನ್ ನಲ್ಲಿ ಪ್ರಮಾಣಪತ್ರ/ಡಿಪ್ಲೊಮಾ ಮತ್ತು ಪಿಜಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಕ್ಕಾಗಿ ನೋಂದಣಿ ಪ್ರಕ್ರಿಯೆಯನ್ನು ಇಗ್ನೋ ಮುಕ್ತಾಯಗೊಳಿಸಿದೆ.

ಇಗ್ನೋ ಪ್ರಕಟಣೆಯಲ್ಲಿ "ಇಗ್ನೋ ಜುಲೈ-2021 ಸೆಷನ್‌ಗಾಗಿ PG ಮತ್ತು UG ಕಾರ್ಯಕ್ರಮಗಳಿಗೆ (ಪ್ರಮಾಣಪತ್ರ ಮತ್ತು ಸೆಮಿಸ್ಟರ್ ಆಧಾರಿತ ಕಾರ್ಯಕ್ರಮಗಳನ್ನು ಹೊರತುಪಡಿಸಿ) ತಾಜಾ ಪ್ರವೇಶಕ್ಕಾಗಿ ಕೊನೆಯ ದಿನಾಂಕವನ್ನು ನವೆಂಬರ್ 12,2021 ರವರೆಗೆ ವಿಸ್ತರಿಸಲಾಗಿದೆ. ಜುಲೈ 2021ರ ಅಧಿವೇಶನದಲ್ಲಿ ಪ್ರಮಾಣಪತ್ರ / ಡಿಪ್ಲೋಮಾ ಮತ್ತು ಪಿಜಿ ಡಿಪ್ಲೋಮಾಗೆ ಪ್ರವೇಶಾತಿ ಮುಕ್ತಾಯವಾಗಿದೆ. ಆಸಕ್ತ ಅಭ್ಯರ್ಥಿಗಳು ODL ಕಾರ್ಯಕ್ರಮಗಳಿಗೆ ಆನ್‌ಲೈನ್ ಪ್ರವೇಶ ಪೋರ್ಟಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು" ಎಂದು ಹೇಳಿದೆ.

ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು :

ಸ್ಕ್ಯಾನ್ ಮಾಡಿದ ಛಾಯಾಚಿತ್ರ (100 KB ಗಿಂತ ಕಡಿಮೆ)
ಸ್ಕ್ಯಾನ್ ಮಾಡಿದ ಸಹಿ (100 KB ಗಿಂತ ಕಡಿಮೆ)
ವಯಸ್ಸಿನ ಪುರಾವೆಗಳ ಸ್ಕ್ಯಾನ್ ಮಾಡಿದ ಪ್ರತಿ (200 KB ಗಿಂತ ಕಡಿಮೆ)
ಸಂಬಂಧಿತ ಶೈಕ್ಷಣಿಕ ಅರ್ಹತೆಯ ಸ್ಕ್ಯಾನ್ ಮಾಡಿದ ಪ್ರತಿ (200 KB ಗಿಂತ ಕಡಿಮೆ)
ಅನುಭವ ಪ್ರಮಾಣಪತ್ರದ ಸ್ಕ್ಯಾನ್ ಮಾಡಿದ ಪ್ರತಿ (ಯಾವುದಾದರೂ ಇದ್ದರೆ) (200 KB ಗಿಂತ ಕಡಿಮೆ)
SC/ST/OBC ಅಭ್ಯರ್ಥಿ ಆಗಿದ್ದಲ್ಲಿ ವರ್ಗ ಪ್ರಮಾಣಪತ್ರದ ಸ್ಕ್ಯಾನ್ ಮಾಡಿದ ನಕಲು (200 KB ಗಿಂತ ಕಡಿಮೆ)
ಬಡತನ ರೇಖೆಗಿಂತ ಕೆಳಗಿದ್ದರೆ (200 KB ಗಿಂತ ಕಡಿಮೆ) BPL ಪ್ರಮಾಣಪತ್ರದ ಸ್ಕ್ಯಾನ್ ಮಾಡಿದ ಪ್ರತಿ
ಮರುಪಾವತಿಸಲಾಗದ ನೋಂದಣಿ ಶುಲ್ಕ 200 ರೂ. ಪ್ರವೇಶದ ಸಮಯದಲ್ಲಿ ಮೊದಲ ಸೆಮಿಸ್ಟರ್/ವರ್ಷದ ಕಾರ್ಯಕ್ರಮ ಶುಲ್ಕದೊಂದಿಗೆ ವಿಧಿಸಲಾಗುತ್ತದೆ.

IGNOU ಜುಲೈ 2021 ಸೆಷನ್ : ಅರ್ಜಿ ಸಲ್ಲಿಸುವುದು ಹೇಗೆ ? :

ಸ್ಟೆಪ್ 1: ಅಧಿಕೃತ ವೆಬ್‌ಸೈಟ್‌ ignou.samarth.edu.in ಅಥವಾ ignou.ac.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಿಗದಿತ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಅಂತಿಮವಾಗಿ ಪರಿಶೀಲಿಸಿಕೊಂಡು ಸಬ್‌ಮಿಟ್ ಮಾಡಿ

ಆನ್‌ಲೈನ್ ಕೋರ್ಸ್‌ಗಳು :

ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ಸಮರ್ಥ ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ignouiop.samarth.edu.in ನಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-11-2021

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://ignou.ac.in/

More News  

For Quick Alerts
ALLOW NOTIFICATIONS  
For Daily Alerts

English summary
IGNOU admission 2021 for july session : Application date again extended to november 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+