IGNOU January Admission 2022 : ಜನವರಿ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2022ರ ಜನವರಿ ಸೆಶನ್ ಪ್ರವೇಶಾತಿಗೆ ನೊಂದಣಿ ಮತ್ತು ಮರುನೊಂದಣಿ ಪ್ರಕ್ರಿಯೆ ಅವಧಿಯು ಇಂದು ಕೊನೆಗೊಳ್ಳಲಿದೆ. ಆಸಕ್ತರು ಆನ್‌ಲೈನ್ ಮೂಲಕ ಇಂದು ಸಂಜೆಯೊಳಗೆ ಅರ್ಜಿಯನ್ನು ಹಾಕಬಹುದು.

ಇಗ್ನೋ ಪ್ರವೇಶಾತಿ : ಜನವರಿ ಸೆಶನ್ ಗೆ ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನ

ಇಗ್ನೋ ದಲ್ಲಿ ಪದವಿ,ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಮತ್ತು ಪಿಜಿ ಸರ್ಟಿಫಿಕೇಟ್ ಕೋರ್ಸ್ ಗಳು ಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.

ಈಗಾಗಲೇ ಇಗ್ನೋದಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಮುಂದಿನ ಸೆಮಿಸ್ಟರ್ ಅಥವಾ ಮುಂದಿನ ವರ್ಷಕ್ಕೆ ಮರುನೊಂದಣಿಯನ್ನು ಮಾಡಿಕೊಳ್ಳಬಹುದು ಮತ್ತು ಆನ್‌ಲೈನ್ ಮೂಲಕ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಆನ್‌ಲೈನ್ ಕೋರ್ಸ್‌ಗಳು :

ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ಸಮರ್ಥ ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ignouiop.samarth.edu.in ನಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-01-2022

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://ignou.ac.in/

ಅರ್ಜಿ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಇಗ್ನೊ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅರ್ಜಿದಾರರು ಅರ್ಜಿ ಶುಲ್ಕ ಪಾವತಿ ಮಾಡಲು ತಮ್ಮದೇ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಬಳಸಬೇಕು. ಭೀಮ್ ಆಪ್ ಸೇರಿದಂತೆ ಯುಪಿಐ ಮೂಲಕ ಪಾವತಿ ಮಾಡಬಹುದು. ಅಂತರಾಷ್ಟ್ರೀಯ ವಿಭಾಗದ ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಆನ್‌ಲೈನ್ ಪಾವತಿ ಆಯ್ಕೆಗಳನ್ನು ಬಳಸಬಹುದು. ಒಂದು ವೇಳೆ ವಿದ್ಯಾರ್ಥಿ ಮಾಡಿದ ಆನ್‌ಲೈನ್ ಪಾವತಿ ಅಪ್‌ಡೇಟ್ ಆಗದಿದ್ದರೆ ತಕ್ಷಣವೇ ಎರಡನೇ ಭಾರಿ ಪಾವತಿ ಪ್ರಯತ್ನ ಮಾಡಬೇಕಾಗಿಲ್ಲ. ವಿದ್ಯಾರ್ಥಿಗಳು ಒಂದು ದಿನ ಕಾದು ಪರಿಶೀಲಿಸಿಕೊಳ್ಳತಕ್ಕದ್ದು. ಒಂದು ವೇಳೆ ವಿದ್ಯಾರ್ಥಿಯು ಅರ್ಜಿ ಶುಲ್ಕವನ್ನು ಎರಡು ಬಾರಿ ಪಾವತಿಸಿದ್ದರೆ, ಅವರ ಪಾವತಿಗಳಲ್ಲಿ ಒಂದನ್ನು ಆಯಾ ಖಾತೆಗೆ ಮರುಪಾವತಿಸಲಾಗುತ್ತದೆ. ಇಗ್ನೊ ಜನವರಿ 2022 ಪ್ರವೇಶಕ್ಕಾಗಿ ನೋಂದಾಯಿಸಿಕೊಳ್ಳುವ ಅಥವಾ ಮರು ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳು ಮತ್ತು ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

IGNOU ಜನವರಿ 2022 ಸೆಷನ್ : ನೊಂದಣಿ ಮಾಡುವುದು ಹೇಗೆ ?

ಸ್ಟೆಪ್ 1: ಅಧಿಕೃತ ವೆಬ್‌ಸೈಟ್‌ ignou.samarth.edu.in ಅಥವಾ ignou.ac.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಿಗದಿತ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಅಂತಿಮವಾಗಿ ಪರಿಶೀಲಿಸಿಕೊಂಡು ಸಬ್‌ಮಿಟ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
IGNOU admission 2022 for january session : Application last date ends today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X