IGNOU July Admission 2022 : ಜುಲೈ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ಅ.31ರ ವರೆಗೆ ವಿಸ್ತರಣೆ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ 2022ರ ಜುಲೈ ಸೆಶನ್ ಯುಜಿ ಮತ್ತು ಪಿಜಿ ಪ್ರವೇಶಾತಿಗೆ ಹೊಸ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆನ್‌ಲೈನ್ ಮತ್ತು ಆನ್‌ಲೈನ್ ದೂರ ಶಿಕ್ಷಣ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಹಾಕಬಹುದು.

ಇಗ್ನೋ ಪ್ರವೇಶಾತಿ : ಜುಲೈ ಸೆಶನ್ ಗೆ ಅರ್ಜಿ ಸಲ್ಲಿಕೆಯ ಅವಧಿ ಅ.31ರ ವರೆಗೆ ವಿಸ್ತರಣೆ

ಈ ಮುಂಚೆ ಅರ್ಜಿ ಸಲ್ಲಿಸಲು ಅಕ್ಟೋಬರ್ 20ರ ವರೆಗೆ ಅವಕಾಶ ನೀಡಲಾಗಿತ್ತು. ತದನಂತರ ಅರ್ಜಿ ಸಲ್ಲಿಸಲು ಅಕ್ಟೋಬರ್ 27ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಅಭ್ಯರ್ಥಿಗಳು ಅಕ್ಟೋಬರ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.

ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200ಕ್ಕೂ ಹೆಚ್ಚು ಕೋರ್ಸ್ ಮತ್ತು 16 ಆನ್‌ಲೈನ್ ಕೋರ್ಸ್ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಆನ್‌ಲೈನ್ ಕೋರ್ಸ್‌ಗಳು :

ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ಸಮರ್ಥ ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ignouiop.samarth.edu.in ನಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-10-2022
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://ignou.ac.in/

IGNOU ಜುಲೈ 2022 ಸೆಷನ್ : ನೊಂದಣಿ ಮಾಡುವುದು ಹೇಗೆ ? :

ಸ್ಟೆಪ್ 1: ಅಧಿಕೃತ ವೆಬ್‌ಸೈಟ್‌ ignou.samarth.edu.in ಅಥವಾ ignou.ac.in ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ನಿಗದಿತ ಪಾವತಿ ವಿಧಾನಗಳ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 5: ಅಂತಿಮವಾಗಿ ಪರಿಶೀಲಿಸಿಕೊಂಡು ಸಬ್‌ಮಿಟ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
IGNOU admission 2022 for july session : Application last date extended to October 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+