ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೋ) ಜನವರಿ 2020 ರ ಶೈಕ್ಷಣಿಕ ಅವಧಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪದವಿ,ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಪಿಜಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ
ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2019
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://www.ignou.ac.in/


Click it and Unblock the Notifications











