IGNOU July Session Admission 2021 : ಇಗ್ನೋ ಜುಲೈ ಸೇಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿ ಮತ್ತೊಮ್ಮೆ ವಿಸ್ತರಣೆ

ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 2021ರ ಜುಲೈ ಸೆಶನ್ ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆಗಸ್ಟ್ 16ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಪದವಿ,ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ಪಿಜಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಅವಕಾಶವಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.

ಇಗ್ನೋ ಜುಲೈ ಸೆಶನ್ ಪ್ರವೇಶಾತಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಅವಧಿ ಮತ್ತೊಮ್ಮೆ ವಿಸ್ತರಣೆ

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಗ್ನೋದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅರ್ಜಿಯನ್ನು ಸಲ್ಲಿಸಿದ ಬಳಿಕ ಇಗ್ನೋ ಎಲ್ಲಾ ಅರ್ಜಿಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸುತ್ತದೆ. ತದನಂತರ ಪ್ರವೇಶಕ್ಕೆ ಅರ್ಹರಾದ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿಗಳನ್ನು ಬಿಡುಗಡೆ ಮಾಡುತ್ತದೆ.

ವಿಶ್ವವಿದ್ಯಾನಿಲಯವು ವಿವಿಧ ವಿಭಾಗಗಳಲ್ಲಿ 200 ಕ್ಕೂ ಹೆಚ್ಚು ಕೋರ್ಸ್ ಗಳನ್ನು ನೀಡುತ್ತಿದೆ. ಈ ಕೋರ್ಸ್ ಗಳಲ್ಲಿ ಪದವಿಗಳು, ಸ್ನಾತಕೋತ್ತರ ಪದವಿಗಳು, ಪಿಜಿ ಡಿಪ್ಲೊಮಾ ಮತ್ತು ಡಿಪ್ಲೊಮಾ, ಪಿಜಿ ಪ್ರಮಾಣಪತ್ರ ಮತ್ತು ಪ್ರಮಾಣಪತ್ರ ಕೋರ್ಸ್‌ಗಳು ಮತ್ತು ಜಾಗೃತಿ ಮಟ್ಟದ ಕೋರ್ಸ್ ಗಳು ಸೇರಿವೆ. ಕೋರ್ಸ್ ಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಪಡೆಯಲು ignouadmission.samarth.edu.in ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಆನ್‌ಲೈನ್ ಕೋರ್ಸ್‌ಗಳು :

ಆಸಕ್ತ ಅಭ್ಯರ್ಥಿಗಳು ಇಗ್ನೊ ಆನ್‌ಲೈನ್ ಪೋರ್ಟಲ್ iop.ignouonline.ac.in ಮೂಲಕ ಅಥವಾ ಸಮರ್ಥ ಪೋರ್ಟಲ್ ಮೂಲಕ ಈ ಆನ್‌ಲೈನ್ ಕಾರ್ಯಕ್ರಮಗಳಿಗಾಗಿ ignouiop.samarth.edu.in ನಲ್ಲಿ ನೋಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2021

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: http://ignou.ac.in/

For Quick Alerts
ALLOW NOTIFICATIONS  
For Daily Alerts

English summary
IGNOU july session admission 2021 re-registration date extended. Candidates can apply before August 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X