JNVST Admission 2023 : 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ಅ.25ರ ವರೆಗೆ ವಿಸ್ತರಣೆ

JNVST ಪ್ರವೇಶಾತಿ 2023 : ನವೋದಯ ವಿದ್ಯಾಲಯ ಸಮಿತಿ (NVS) ಪ್ರಸ್ತುತ 2023-24ರ ಶೈಕ್ಷಣಿಕ ವರ್ಷಕ್ಕೆ 9ನೇ ತರಗತಿಯ ಪ್ರವೇಶಕ್ಕಾಗಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ - nvsadmissionclassnine.in ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಹಾಕಬಹುದು. ಅಖಿಲ ಭಾರತ ಮಟ್ಟದ ಪ್ರವೇಶ ಪರೀಕ್ಷೆಯ ಆಧಾರದ ಮೇಲೆ 9ನೇ ತರಗತಿಗೆ JNVST ಪ್ರವೇಶಕ್ಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 15,2022ರೊಳಗೆ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಅಕ್ಟೋಬರ್ 25,2022ರ ವರೆಗೆ ವಿಸ್ತರಿಸಲಾಗಿದೆ.

ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಅರ್ಹತೆಗಳು :

JNVST 9ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆಯಲು ಅಭ್ಯರ್ಥಿಯು ಉತ್ತಮ ನಿವಾಸಿಯಾಗಿರಬೇಕು ಮತ್ತು 2022-23ರ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಹಿಂದಿನ ಶೈಕ್ಷಣಿಕ ಅವಧಿಗಳಲ್ಲಿ 8ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.

ಅಭ್ಯರ್ಥಿಯು ಜವಾಹರ ನವೋದಯ ವಿದ್ಯಾಲಯ ಕಾರ್ಯನಿರ್ವಹಿಸುತ್ತಿರುವ ಮತ್ತು ಪ್ರವೇಶ ಪಡೆಯುವ ಜಿಲ್ಲೆಯ ಮಾನ್ಯತೆ ಪಡೆದ ಶಾಲೆಯಲ್ಲಿ ಓದಬೇಕಾಗುತ್ತದೆ.

ವಿದ್ಯಾರ್ಥಿಯು ಮೇ 1, 2008 ಮತ್ತು ಏಪ್ರಿಲ್ 30, 2010 (ಎರಡೂ ದಿನಗಳನ್ನು ಒಳಗೊಂಡಂತೆ) ನಡುವೆ ಜನಿಸಿರಬೇಕು.

ಅಭ್ಯರ್ಥಿಗಳ ಆಯ್ಕೆಯನ್ನು ಫೆಬ್ರವರಿ 11, 2022 ರಂದು ನಡೆಯುವ ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ ಎನ್ನವುದನ್ನು ತಿಳಿಯಲು ಮುಂದೆ ನೋಡಿ.

JNVST 9ನೇ ತರಗತಿ ಪ್ರವೇಶ 2023ಗೆ ಅರ್ಜಿ ಸಲ್ಲಿಸಲು ಈ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ವಿದ್ಯಾರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ nvsadmissionclassnine.in. ಗೆ ಭೇಟಿ ನೀಡಿ.
ಸ್ಟೆಪ್ 2 : ಮುಖಪುಟದಲ್ಲಿ JNVST 9ನೇ ತರಗತಿ ಪ್ರವೇಶ 2023 ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3 : ವಿದ್ಯಾರ್ಥಿಗಳು ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿ.
ಸ್ಟೆಪ್ 4 : ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಸ್ಟೆಪ್ 5 : ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಮುದ್ರಣವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟೌಟ್ ತೆಗೆದುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
Javahar navodaya vidyalaya application date extended to october 25 for class 9 admission.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X