ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಡಿಪ್ಲೊಮಾ ಕೋರ್ಸ್ ಪ್ರವೇಶ ಪ್ರಕಟ

Posted By:

ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ 2017-18 ಸಾಲಿನ ಡಿಪ್ಲೊಮಾ ಕೋರ್ಸಿಗೆ ಪ್ರವೇಶ ಪ್ರಕಟಸಿದೆ.

ಕರ್ನಾಟಕ ರಾಜ್ಯ ಸರ್ಕಾರ ಮಹಾಮಂಡಳವು ರಾಜ್ಯದ ಬೆಂಗಳೂರು ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾಗೂ ಕಲಬುರಗಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದೆ.

ಈ ತರಬೇತಿ ಸಂಸ್ಥೆಗಳ ಮೂಲಕ ಸಹಕಾರ ಸಂಘ ಸಂಸ್ಥೆ/ಸಹಕಾರ ಇಲಾಖೆ /ಸಹಕಾರ ಲೆಕ್ಕಪರಿಶೋಧನಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ದಿನಾಂಕ: 01-07-2017 ರಿಂದ ಪ್ರಾರಂಭಿಸಲಾಗುತ್ತದೆ, ಈ ತರಬೇತಿಯನ್ನು ಪಡೆಯಲಿಚ್ಛಸಿವ ಅರ್ಹ ಅಭ್ಯರ್ಥಿಗಳಿಂದ ದಿನಾಂಕ 01-05-2017 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿಪ್ಲೊಮಾ ಕೋರ್ಸ್ ಪ್ರವೇಶ ಪ್ರಕಟ

ತರಬೇತಿಯನ್ನು ಪಡೆಯಲಿಚ್ಛಿಸಿವ ಅಭ್ಯರ್ಥಿಗಳು ಸಹಕಾರ ಸಂಘ/ಸಹಕಾರ ಇಲಾಖೆ/ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.

ವಯೋಮಿತಿ: 16 ವರ್ಷ ದಾಟಿರಬೇಕು.

ಸೂಚನೆ

 • ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಸಲಾಗಿರುತ್ತದೆ.
 • ಕನಿಷ್ಠ ವಿದ್ಯಾರ್ಥತೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
 • ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೆಲ್ಪಟ್ಟು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ.
 • ಇಂತಹಾ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.400/- ಶಿಷ್ಯವೇತನ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ಪಂಗಡಗಳಿಗೆ

 • ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ವಿಶೇಷ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು.
 •  ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಸಹ ನೀಡಲಾಗುವುದು. ಈ ವರ್ಗದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ಮಿನಿಮಯ ಕಛೇರಿಯಿಂದ ತರಿಸಿಕೊಳ್ಳಲಾಗುವುದು.
 • ಈ ವರ್ಗದ ಅಭ್ಯರ್ಥಿಗಳು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಭಂದಕರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
 • ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು.
 • ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500/- ಶಿಷ್ಯವೇತನ ನೀಡಲಾಗುವುದು.

ಪ್ರಸಕ್ತ ತರಬೇತಿ ಅಧಿವೇಶನವು ದಿನಾಂಕ 01-07-2017 ರಿಂದ ಪ್ರಾರಂಭವಾಗಲಿದೆ.

ಅರ್ಜಿ ಸಲ್ಲಿಕೆ

ಡಿಸಿಎಂ ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ತರಬೇತಿ ಸಂಸ್ಥೆಯಿಂದ ಪಡೆಯಬಹುದು.

 • ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.75 ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು.
 • ಅಂಚೆ ಮೂಲಕ ಪಡೆಯಲು ಇಚ್ಛಿಸುವವರು ರೂ.125/- ಗಳ ಡಿ.ಡಿ ಮೂಲಕ ಪಾವತಿಸಿ ಪಡೆಯಬಹುದಾಗಿದೆ.
 •  ತರಬೇತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-06-2017 ಒಳಗಾಗಿ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಆಯಾ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸುವುದು.

English summary
Admissions are now open for diploma in co operative management at Karnataka institute of co operative management.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia