ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆರನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆರನೇ ತರಗತಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಜನವರಿ 13 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ 2018-19 ನೇ ಸಾಲಿನ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್ ಎಸ್ ಸಿ ನೇಮಕಾತಿ: ಭಾಷಾ ತಾರತಮ್ಯ, ಕನ್ನಡಿಗರಿಗೆ ಅನ್ಯಾಯ! ಎಸ್ ಎಸ್ ಸಿ ನೇಮಕಾತಿ: ಭಾಷಾ ತಾರತಮ್ಯ, ಕನ್ನಡಿಗರಿಗೆ ಅನ್ಯಾಯ!

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತರು ಜನವರಿ 13 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎಚ್ ಎ ಎಲ್ : ಎಸ್ ಎಸ್ ಎಲ್ ಸಿ ಆದವರಿಗೆ ಅಪ್ರೆಂಟಿಸ್ ಎಚ್ ಎ ಎಲ್ : ಎಸ್ ಎಸ್ ಎಲ್ ಸಿ ಆದವರಿಗೆ ಅಪ್ರೆಂಟಿಸ್

6 ನೇ ತರಗತಿಗೆ ಪ್ರವೇಶಾತಿ

ಈ ಶಾಲೆಗಳಲ್ಲಿ 6 ರಿಂದ 10 ನೇ ತರಗತಿಯವರೆಗೆ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. (ಚಾಮರಾಜನಗರದ ಟೌನ್ ನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಪ.ಪಂ) ಮತ್ತು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕು ನಂದಗಡದ ಸಂಗೊಳ್ಳಿರಾಯಣ್ಣ ಸನಿವಾಸ ಈ ಶಾಲೆಗಳು ಕನ್ನಡ ಮಾಧ್ಯಮದ ಶಾಲೆಗಳಾಗಿವೆ)

ಆರ್ಮಿ ಸ್ಕೂಲ್‌: 8000 ಬೋಧಕ ಹುದ್ದೆಗಳ ನೇಮಕಾತಿಆರ್ಮಿ ಸ್ಕೂಲ್‌: 8000 ಬೋಧಕ ಹುದ್ದೆಗಳ ನೇಮಕಾತಿ

ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಮತ್ತು ಇನ್ನಿತರ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯದ ಮಿತಿ

  • ಪ.ಜಾತಿ/ಪ.ಪಂಗಡ/ಪ್ರ-೧ರ ವಿದ್ಯಾರ್ಥಿಗಳ ಕುಟುಂಬದ ಆದಾಯ ಮಿತಿ: ರೂ.2,50,000/-
  • ಹಿಂದುಳಿದ ವರ್ಗ 2ಎ, 2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳ ಕುಟುಂಬದ ಆದಾಯ ಮಿತಿ: ರೂ.1,00,000/-

ಪ್ರಮುಖ ದಿನಾಂಕಗಳು

  • ಅರ್ಜಿ ವಿತರಣೆ ದಿನಾಂಕ: 13-12-2017
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:13-01-2018 (ಸಂಜೆ 5.30 ರ ವರೆಗೆ)
  • ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ:18-02-2018 (ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ರವರೆಗೆ)

ಅರ್ಜಿ ಸಲ್ಲಿಕೆ

ಪರೀಕ್ಷೆಗೆ ಸಂಬಂಧಪಟ್ಟ ಅರ್ಜಿಗಳು ಹಾಗೂ ಇನ್ನಿತರ ಮಾಹತಿಗಳು ಆಯಾಯ ತಾಲ್ಲೂಕಿನ ಎಲ್ಲಾ ವಸತಿ ಶಾಲೆಗಳ ಪ್ರಾಂಶುಪಾಲರ ಕಚೇರಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಚೇರಿ, ಜಂಟಿ/ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಕಚೇರಿ/ ಜಿಲ್ಲಾ ಪರಿಶಿಷ್ಟ ವರ್ಗಗಳ/ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ.

ಅಥವಾ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕೃತ ವೆಬ್ಸೈಟ್ ನಿಂದಲೂ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KARNATAKA RESIDENTIAL EDUCATIONAL INSTITUTIONS SOCIETY (KREIS) invites applications for the admissions of Class 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X