Kuvempu University Admission 2021-2022 : ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕುವೆಂಪು ವಿಶ್ವವಿದ್ಯಾಲಯವು 2021-22ನೇ ಸಾಲಿಗೆ ವಿವಿಧ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಲ್ಲಿ ನೀಡಲಾಗಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು.

 
ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್, ಶಂಕರಘಟ್ಟ, ಸ್ನಾತಕೋತ್ತರ ಕೇಂದ್ರ, ಕಡೂರು ಹಾಗೂ ಚಿಕ್ಕಮಗಳೂರು, ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ ಮತ್ತು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಲಭ್ಯವಿದ್ದು, ಸಂಯೋಜಿತ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳನ್ನು ಕೂಡ ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರವೇಶಾತಿಯಲ್ಲಿ ಆಫ್‌ಲೈನ್ ಮೂಲಕ ತುಂಬಲಾಗುವುದು.

ಎಲ್ಲಾ ಕೋರ್ಸ್ ಗಳು ಸಿಬಿಸಿಎಸ್ ಸ್ಕೀಂ ಮಾದರಿಯಲ್ಲಿರುತ್ತವೆ. ಎಂಬಿಎ/ಎಂಸಿಎ ಪದವಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ನಡೆಸುವ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯ (ಪಿಜಿಸಿಇಟಿ) ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಲಾಗುವುದು. ತದನಂತರ ಭರ್ತಿಯಾಗದೆ ಉಳಿಯುವ ಸ್ಥಾನಗಳಿದ್ದಲ್ಲಿ ವಿಶ್ವವಿದ್ಯಾಲಯವು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ಕೋರ್ಸ್ ಗಳು ಮತ್ತು ವಿಷಯಗಳ ಕುರಿತು ತಿಳಿಯಲು ಪ್ರಕಟಣೆಯನ್ನು ಓದಬಹುದು.

ಅರ್ಜಿ ಶುಲ್ಕ:

ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಬಯಸುವ ಓಬಿಸಿ ವರ್ಗದ ಅಭ್ಯರ್ಥಿಗಳು 600/-ರೂ ಹಾಗೂ ಪರಿ‍ಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು "ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ" ಇವರ ಹೆಸರಿನಲ್ಲಿ ಸಂದಾಯವಾಗುವಂತೆ ಡಿಡಿ ಮೂಲಕ ಪಾವತಿಸಬೇಕು. ಚಲನ್ ಮೂಲಕ ಪಾವತಿಸುವ ವಿದ್ಯಾರ್ಥಿಗಳು ಎಸ್‌ಬಿಐ ಜ್ಞಾನಸಹ್ಯಾದ್ರಿ ಶಾಖೆ, ಶಂಕರಘಟ್ಟ ಇಲ್ಲಿ "ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ" ಇವರ ಖಾತೆ ಸಂಖ್ಯೆ 54023036291 ಗೆ ಜಮಾ ಮಾಡಬೇಕಿರುತ್ತದೆ. ತದನಂತರ ನೇರವಾಗಿ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಕ್ಕೆ ನಿಗದಿತ ದಿನಾಂಕ ಡಿಸೆಂಬರ್ 16,2021ರೊಳಗೆ ಸಲ್ಲಿಸಬೇಕು.

 

ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂಬಿಎ, ಎಂಸಿಎ, ಬಿ.ಪಿ.ಇಡಿ, ಹಾಗೂ ಎಂ.ಪಿ.ಇಡಿ. ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷಾ ಶುಲ್ಕ 300/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 200/-ರೂ ಹೆಚ್ಚುವರಿಯಾಗಿ ಪ್ರತ್ಯೇಕವಾಗಿ ಡಿಡಿ/ಚಲನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kuvempu.ac.in/kan/index.php ಗೆ ಭೇಟಿ ನೀಡಿ ಪ್ರಕಟಣೆಯನ್ನು ಓದಬಹುದು. ನಂತರ ಅಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 16,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ವಿದೇಶಿ ವಿದ್ಯಾರ್ಥಿಗಳು ಹಾಗೂ ಕಾಶ್ಮೀರಿ ವಲಸಿಗ ವಿದ್ಯಾರ್ಥಿಗಳಿಗೆ ಡಿಸೆಂಬರ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಹಾಕಬಹುದು. ಒಂದಕ್ಕಿಂತ ಹೆಚ್ಚು ವಿಷಯಗಳಿಗೆ ಅರ್ಜಿ ಸಲ್ಲಿಸಬಯಸುವವರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳತಕ್ಕದ್ದು. ಆದರೆ ವಿದ್ಯಾರ್ಥಿಯು ಮೂಲ ರಶೀದಿಯ ಛಾಯಾ ಪ್ರತಿಯನ್ನು ಅಂತಹ ಹೆಚ್ಚುವರಿ ಅರ್ಜಿಗಳಿಗೆ ಲಗತ್ತಿಸತಕ್ಕದ್ದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Kuvempu university invited applications for post graduate and post graduate diploma programmes for academic year 2021-2022.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X