ಮೈಸೂರು ವಿಶ್ವವಿದ್ಯಾನಿಲಯ ವಿವಿಧ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭ

ಎಲ್ಲಾ ಸ್ನಾತಕೋತ್ತರ ಕೋರ್ಸಿಗೂ ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆ ಮಾಡಲಾಗುವುದು. ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ವಿವಿಧ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸ್ ಸೇರಿದಂತೆ ಇನ್ನಿತರ ಸರ್ಟಿಫಿಕೆಟ್ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

ಮಾನಸ ಗಂಗೋತ್ರಿ-ಮೈಸೂರು, ಸ್ನಾತಕೋತ್ತರ ಕೇಂದ್ರ ತೂಬಿನಕರೆ-ಮಂಡ್ಯ, ಹೇಮಗಂಗೋತ್ರಿ-ಹಾಸನ, ಡಾ.ಬಿ.ಆರ್-ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ-ಚಾಮರಾಜನಗರ ಸೇರಿದಂತೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಒಳಪಡುವ ಇನ್ನಿತರ ಕಾಲೇಜುಗಳ 2017-18 ಸಾಲಿನ ಕಲೆ, ವಿಜ್ಞಾನ, ವಾಣಿಜ್ಯ ಮತ್ತು ಕಾನೂನು ಕೋರ್ಸ್ ಗಳಿಗಾಗಿ ಪ್ರವೇಶಾತಿ ಪ್ರಾರಂಭಿಸಲಾಗಿದೆ.

ಈ ಕೋರ್ಸ್ ಗಳಿಗೆ ಸೇರ ಬಯಸುವ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ದಿನಾಂಕ 21-06-2017 ರೊಳಗಾಗಿ ಅರ್ಜಿ ಸಲ್ಲಿಸಬಹದಾಗಿದೆ.

ಮೈಸೂರು ವಿಶ್ವವಿದ್ಯಾನಿಲಯ ಪ್ರವೇಶಾತಿ

ಎಲ್ಲಾ ಸ್ನಾತಕೋತ್ತರ ಕೋರ್ಸಿಗೂ ಪ್ರವೇಶ ಪರೀಕ್ಷೆ ನಡೆಸಿ ಸೀಟು ಹಂಚಿಕೆ ಮಾಡಲಾಗುವುದು. ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸ್ ಸೇರ ಬಯಸುವವರು ಶಿಕ್ಷಣ ಪ್ರಾಧಿಕಾರವನ್ನು ಸಂಪರ್ಕಿಸಲು ಸೂಚಿಸಿದೆ

ಅರ್ಜಿ ಶುಲ್ಕ ಮತ್ತ ಪ್ರವೇಶ ಪರೀಕ್ಷೆ ಶುಲ್ಕ

ಒಂದೊಂದು ಕೋರ್ಸಿಗೂ ಒಂದೊಂದು ರೀತಿಯ ಶುಲ್ಕವಿದ್ದು, ಶುಲ್ಕ ಮತ್ತ ಇನ್ನಿತರ ವಿವರವನ್ನು ವೆಬ್ಸೈಟ್ ನಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕದ ಹೊರತಾಗಿ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆ ಶುಲ್ಕ ರೂ.400/- ಗಳನ್ನು ಮೈಸೂರು ವಿಶ್ವವಿದ್ಯಾಲಯದ ವೆನ್ಸೈಟ್ ನಲ್ಲಿ ಆನ್-ಲೈನ್ ಮೂಲಕ ಪಾವತಿಸತಕ್ಕದ್ದು.

ಅಭ್ಯರ್ಥಿಗಳ ಆಯ್ಕೆ

ಪ್ರವೇಶ ಪರೀಕ್ಷೆಯ ಅಂಕಗಳು ಮತ್ತು ಪದವಿಯಲ್ಲಿ ಗಳಿಸಿರುವ ಅಂಕಗಳ ಶೇಕಡವಾರು ಗಮನಿಸಿ ಮೆರಿಟ್ ಆಧಾರದ ಮೇಲೆ ಸೀಟು ದಾಖಲಾತಿ ಮಾಡಿಕೊಳ್ಳಲಾಗುವುದು.

ಹೆಚ್ಚಿನ ವಿವರಗಳಿಗಾಗಿ www.uni-mysore.ac.in ಗಮನಿಸಿ

More News  

For Quick Alerts
ALLOW NOTIFICATIONS  
For Daily Alerts

English summary
University of Mysore (UOM) invites applications online, through its online admissions portal from eligible candidates for various Post Graduate programmes in Arts, Commerce, Law, Education and Science.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+