Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ

ನೀನಾಸಂ ಪ್ರವೇಶಾತಿ ದಿನಾಂಕ ಮೇ ತಿಂಗಳಲ್ಲಿ ಪ್ರಕಟ

ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯತೆ ಪಡೆದಿರುವ ನೀನಾಸಮ್ ರಂಗಶಿಕ್ಷಣ ಕೇಂದ್ರ 2020-21ನೇ ಸಾಲಿನ ಡಿಪ್ಲೋಮಾ ಪ್ರವೇಶಾತಿ ದಿನಾಂಕಗಳನ್ನು ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟಿಸಲಿದೆ. ಪ್ರವೇಶಾತಿ ದಿನಾಂಕಗಳು ಪ್ರಕಟವಾದ ಬಳಿಕ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

 

ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಇರಬೇಕು. ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿಯಿದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದ್ದು ಹದಿನೈದು ಮಂದಿಗೆ ವಿದ್ಯಾರ್ಥಿವೇತನ ದೊರೆಯುತ್ತದೆ.

ನೀನಾಸಂ ಪ್ರವೇಶಾತಿ ದಿನಾಂಕ ಮೇ ತಿಂಗಳಲ್ಲಿ ಪ್ರಕಟ

ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಮುಂತಾಗಿ ವಿಸ್ತಾರವಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಕೇಂದ್ರದ ನುರಿತ ಅಧ್ಯಾಪಕರುಗಳಲ್ಲದೆ ಹೊರಗಿನ ತಜ್ಞರನ್ನು ಕರೆಸಿ ಸಾಕಷ್ಟು ಪ್ರಬುದ್ಧ ಶಿಕ್ಷಣ ಕೊಡಲಾಗುತ್ತದೆ. ಒಳ್ಳೆಯ ಗ್ರಂಥ ಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆಯಿದ್ದು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಪ್ರತಿದಿನ ಸುಮಾರು 12 (07.00 am- 09.30 pm) ಗಂಟೆಗಳಷ್ಟು ಕಾಲ ಅಭ್ಯಾಸದಲ್ಲಿ ತೊಡಗಿರಬೇಕಾಗುತ್ತದೆ.

ಪ್ರಾಸ್ಪೆಕ್ಟಸ್, ಶುಲ್ಕದ ವಿವರ ಮತ್ತು ಪ್ರವೇಶ ಪತ್ರಗಳನ್ನು www.ninasam.org ನಿಂದ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ನಮ್ಮ ಕಛೇರಿಗೆ ಬರೆದು ಅಂಚೆಯಲ್ಲಿ ತರಿಸಿಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
Ninasam will announce the dates for application of diploma courses 2020-21 after 1st week of may.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X