Navodaya Vidyalaya Admission 2022 : 6ನೇ ತರಗತಿ ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜವಾಹರ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಅನುಸಾರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 15,2021 ಕೊನೆಯ ದಿನವಾಗಿದೆ.

 
ನವೋದಯ ವಿದ್ಯಾಲಯ ಪ್ರವೇಶಾತಿ : 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜೆಎನ್‌ವಿ ಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.nvsadmissionclassnine.in/nvs/homepage ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಸಕ್ತ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯು ಏಪ್ರಿಲ್ 30,2022ರಂದು ಬೆಳಿಗ್ಗೆ 11:30ಕ್ಕೆ ನಡೆಯಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಆಯ್ಕೆಯಾದ ವಿದ್ಯಾರ್ಥಿಗಳು ರಾಜ್ಯಗಳಲ್ಲಿರುವ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಅರ್ಹರಾಗಿರುತ್ತಾರೆ.

ಜೆಎನ್‌ವಿ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹತೆಗಳು :

2021-22ರ ಶೈಕ್ಷಣಿಕ ಅವಧಿಯಲ್ಲಿ ಜವಾಹರ ನವೋದಯ ವಿದ್ಯಾಲಯ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ನವೋದಯ ಶಾಲೆಗೆ ಪ್ರವೇಶ ಪಡೆಯಲು ಬಯಸುತ್ತಿರುವ ಜಿಲ್ಲೆಯಿಂದ 2021-22ರ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರ ಅಥವಾ ಸರ್ಕಾರದಿಂದ ಅನುಮೋದಿತ ಶಾಲೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿಯಾಗಿರಬೇಕು ಅಥವಾ ಅವನು/ಅವಳು ಪ್ರವೇಶವನ್ನು ಬಯಸುವ ಅದೇ ಜಿಲ್ಲೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS) ನಿಂದ ಸಾಮರ್ಥ್ಯದ ಕೋರ್ಸ್ ನಲ್ಲಿ 'ಬಿ' ಪ್ರಮಾಣಪತ್ರವನ್ನು ಹೊಂದಿರಬೇಕು.

ನವೋದಯ ಶಾಲೆಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಯು ಮೇ 1, 2009 ಮತ್ತು ಏಪ್ರಿಲ್ 30, 2013ರ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ನಡುವೆ ಜನಿಸಿರಬೇಕು. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ.

 

ಸೆಪ್ಟೆಂಬರ್ 15, 2021ರ ಮೊದಲು 5 ನೇ ತರಗತಿಗೆ ಪ್ರವೇಶ ಪಡೆಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ವಿದ್ಯಾರ್ಥಿಗಳಿಗೆ ಒಂದು ಬಾರಿ ಮಾತ್ರ ಆಯ್ಕೆ ಪರೀಕ್ಷೆಗೆ ಹಾಜರಾಗಲು ಅವಕಾಶವಿರುತ್ತದೆ.

ಅರ್ಹತಾ ಮಾನದಂಡಗಳ ಕುರಿತು ವಿವರವಾದ ಮಾಹಿತಿಯನ್ನು ಪಡೆಯಲು ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪಡೆಯಬಹುದು.

For Quick Alerts
ALLOW NOTIFICATIONS  
For Daily Alerts

English summary
NVS Admission 2022 : application last date again extended for class 6 to December 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X