Navodaya Vidyalaya Admission 2022 : 9ನೇ ತರಗತಿ ಆಯ್ಕೆ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜವಾಹರ ನವೋದಯ ವಿದ್ಯಾಲಯಗಳಲ್ಲಿ 2022-23ನೇ ಸಾಲಿಗೆ 9ನೇ ತರಗತಿ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿ ಅನುಸಾರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ನವೋದಯ ವಿದ್ಯಾಲಯ ಪ್ರವೇಶಾತಿ : 9ನೇ ತರಗತಿ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜೆಎನ್‌ವಿ ಯಲ್ಲಿ 9ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://www.nvsadmissionclassnine.in/nvs/homepage ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಸಕ್ತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿ ರುತ್ತಾರೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯು ಏಪ್ರಿಲ್ 9,2022ರ ಶನಿವಾರದಂದು ನಡೆಯಲಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಮತ್ತು ಆಯ್ಕೆಯಾದ ವಿದ್ಯಾರ್ಥಿಗಳು ರಾಜ್ಯಗಳಲ್ಲಿರುವ ನವೋದಯ ವಿದ್ಯಾಲಯಗಳಲ್ಲಿ 9 ನೇ ತರಗತಿಗೆ ಲ್ಯಾಟರಲ್ ಎಂಟ್ರಿ ಪಡೆಯಲು ಅರ್ಹರಾಗಿರುತ್ತಾರೆ.

ನವೋದಯ ವಿದ್ಯಾಲಯ ಪ್ರವೇಶಾತಿ : 9ನೇ ತರಗತಿ ಪ್ರವೇಶಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಜೆಎನ್‌ವಿ 9ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹತೆಗಳು :

2021-22ರ ಶೈಕ್ಷಣಿಕ ಅವಧಿಯಲ್ಲಿ ಜವಾಹರ ನವೋದಯ ವಿದ್ಯಾಲಯ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳಲ್ಲಿ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ.

ನವೋದಯ ಶಾಲೆಗೆ ಪ್ರವೇಶ ಪಡೆಯಲು ಬಯಸುತ್ತಿರುವ ಜಿಲ್ಲೆಯಿಂದ 2021-22ರ ಶೈಕ್ಷಣಿಕ ಅವಧಿಯಲ್ಲಿ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ನವೋದಯ ಶಾಲೆಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಯು ಮೇ 1, 2006 ಮತ್ತು ಏಪ್ರಿಲ್ 30, 2010 (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ನಡುವೆ ಜನಿಸಿರಬೇಕು. ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅನ್ವಯಿಸುತ್ತದೆ.

ಜೆಎನ್‌ವಿ ಪ್ರವೇಶ ನೀತಿಯ ಪ್ರಕಾರ ಜೆಎನ್‌ವಿಎಸ್‌ಟಿ 9 ನೇ ತರಗತಿಯ ಪ್ರವೇಶ ಪರೀಕ್ಷೆಯು ಎರಡು ಗಂಟೆ 30 ನಿಮಿಷಗಳ ಅವಧಿಯದ್ದಾಗಿದೆ. ಪರೀಕ್ಷೆಯಲ್ಲಿ ಇಂಗ್ಲಿಷ್, ಹಿಂದಿ, ಗಣಿತ ಮತ್ತು ವಿಜ್ಞಾನ ವಿಷಯಗಳುಳ್ಳ 4 ವಿಭಾಗಗಳಿರುತ್ತವೆ. ಒಟ್ಟು 100 ಅಂಕಗಳನ್ನು ಹೊಂದಿರುವ 100 ವಸ್ತುನಿಷ್ಠ ಮಾದರಿಯ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
NVS Admission 2022: application date extended for class 9 selection test.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+