ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಅಧ್ಯಯನಕ್ಕೆ ಅರ್ಜಿ ಆಹ್ವಾನ

Posted By:

2017 -18 ರ ಸಾಲಿನ ಪಿಎಚ್.ಡಿ ಗಾಗಿ (ಪೂರ್ಣಕಾಲಿಕ ಮತ್ತು ಅರೆಕಾಲಿಕ) ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸರ್ಕಾರಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ಪ್ರವೇಶ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಂಡು ವಿಶ್ವವಿದ್ಯಾಲಯಕ್ಕೆ ಆಗಸ್ಟ್ 19 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಪಿಎಚ್.ಡಿ ಅಧ್ಯಯನಕ್ಕೆ ಅರ್ಜಿ ಆಹ್ವಾನ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಲಭ್ಯವಿರುವ ವಿಷಯಗಳು

ಕನ್ನಡ, ಇಂಗ್ಲಿಷ್, ಸಂಸ್ಕೃತ, ಹಿಂದಿ, ಉರ್ದು, ಎಕನಾಮಿಕ್ಸ್, ಸೋಷಿಯಾಲಜಿ, ಪೊಲಿಟಿಕಲ್ ಸೈನ್ಸ್, ಹಿಸ್ಟರಿ ಅಂಡ್ ಆರ್ಕ್ಯಾಲಜಿ, ಜರ್ನಲಿಸಂ ಅಂಡ್ ಮಾಸ್ ಕಮ್ಯುನಿಕೇಷನ್, ಸೋಷಿಯಲ್ ವರ್ಕ್, ಕಾಮರ್ಸ್, ಎಂ.ಬಿ.ಎ, ಎಂಟಿಎ, ಫಿಸಿಕ್ಸ್, ಕೆಮಿಸ್ಟ್ರಿ, ಪಾರ್ಮಸಿಟಿಕಲ್ ಕೆಮಿಸ್ಟ್ರಿ, ಇಂಡಸ್ಟ್ರಿಯಲ್ ಕೆಮಿಸ್ಟ್ರಿ, ಮ್ಯಾಥಮೆಟಿಕ್ಸ್, ಅಪ್ಲೈಡ್ ಬಾಟನಿ, ಝೂಲಾಜಿ, ಬಯೋಕೆಮಿಸ್ಟ್ರಿ, ಎಲೆಕ್ಟ್ರಾನಿಕ್ಸ್, ಎಂಸಿಎ, ಕಂಪ್ಯೂಟರ್ ಸೈನ್ಸ್, ವೈಲ್ಡ್ ಲೈಫ್ ಅಂಡ್ ಮ್ಯಾನೇಜ್ಮೆಂಟ್, ಮೈಕ್ರೋಬಯಾಲಜಿ, ಬಯೋಟೆಕ್ನಾಲಜಿ, ಅಪ್ಲೈಡ್ ಜಿಯಾಲಜಿ, ಎನ್ವಿರಾನ್ಮೆಂಟಲ್ ಸೈನ್ಸ್, ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್, ಎಜುಕೇಷನ್, ಫಿಸಿಕಲ್ ಎಜುಕೇಷನ್.

ಅರ್ಜಿ ಸಲ್ಲಿಕೆ

ಅರ್ಜಿಗಳ್ನು ವಿಶ್ವವಿದ್ಯಾಲಯದ ವೆಬ್ಸೈಟ್ ಮೂಲಕ ಪಡೆದು, ಭರ್ತಿ ಮಾಡಿ ಡಿಡಿ ಯೊಂದಿಗೆ ನಿಗದಿ ದಿನಾಂಕದೊಳಗೆ ಸಂಬಂಧ ಪಟ್ಟ ವಿಭಾಗದ ಕಚೇರಿಗೆ ಕಳುಹಿಸತಕ್ಕದ್ದು.

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-
  • ಎಸ್.ಸಿ/ಎಸ್.ಟಿ/ಪ್ರ-1ಅಭ್ಯರ್ಥಿಗಳಿಗೆ ರೂ.750/-
  • ಹಣಕಾಸು ಅಧಿಕಾರಿ, ಕುವೆಂಪು ವಿಶ್ವವಿದ್ಯಾಲಯ ಇವರ ಹೆಸರಿಗೆ ಸಂದಾಯವಾಗುವಂತೆ ಡಿಡಿ ಪಾವತಿಸತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19-08-2017

ಹೆಚ್ಚಿನ ಮಾಹಿತಿಗಾಗಿ ಗಮನಿಸಿ www.kuvempu.ac.in

English summary
Kuvempu University Shivamogga, Applications are invited from the eligible candidates for enrolment to Ph.D

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia