Advertisement
BPCL Recruitment 2021: ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅನ್‌ಲೈನ್ ಮೂಲಕ ಜೂನ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 45 ರಿಂದ ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನ:
ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,80,000/- ರಿಂದ 3,40,000/-ರೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್
https://pesb.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 15,2021ರ ಮಧ್ಯಾಹ್ನ 3 ಗಂಟೆಯೊಳೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ. {file1}