ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗ್ರೂಪ್ 'ಸಿ' ವೃಂದದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ.
ಪ್ರವೇಶ ಪತ್ರಗಳು ಇಲಾಖೆಯ ವೆಬ್ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಗ್ರೂಪ್ 'ಸಿ' ವೃಂದದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 13-10-2017 ರಂದು ಮತ್ತು ಪದವಿಗಿಂತ ಕೆಳಮಟ್ಟದ ವಿದ್ಯಾರ್ಹತೆ ಹೊಂದಿರುವ ಎಲ್ಲಾ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ:16-10-2017 ರಂದು ನಡೆಸಲಾಗುವುದು.
ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ
- ಆಯೋಗದ ವೆಬ್ಸೈಟ್ ನಲ್ಲಿ "Apply Online Admission Ticket Download" ಅನ್ನು ಕ್ಲಿಕ್ ಮಾಡಿ.
- "CLICK HERE TO DOWNLOAD THE ADMISSION TICKET FOR KREIS EXAMINATION" ಅನ್ನು ಕ್ಲಿಕ್ ಮಾಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.
ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಅಭ್ಯರ್ಥಿಗಳು ಪರೀಕ್ಷಾ ಉಪಕೇಂದ್ರಗಳಿಗೆ ಪ್ರವೇಶ ಪತ್ರ ಹಾಗೂ ಅವರ ಅರ್ಜಿಯೊಂದಿಗೆ ಅಪ್ಲೋಡ್ ಮಾಡಿದ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರು ಪಡಿಸುವುದು ಕಡ್ಡಾಯವಾಗಿದೆ.
ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿ ಆಧಾರ್ ಕಾರ್ಡ್ ಸ್ವೀಕೃತವಾಗದ ಅಭ್ಯರ್ಥಿಗಳು ಫೋಟೋ ಇರುವ ಮತ್ತೊಂದು ಗುರುತಿನ ಚೀಟಿಯನ್ನು (ಡ್ರೈವಿಂಗ್ ಲೈಸೆನ್ಸ್/ಚುನಾವಣಾ ಐ.ಡಿ/ಪಾಸ್ ಪೊರ್ಟ್/ಪಾನ್ ಕಾರ್ಡ್/ ಸರ್ಕಾರಿ ನೌಕರರ ಐ.ಡಿ) ಕಡ್ಡಾಯವಾಗಿ ಹಾಜರು ಪಡಿಸಬೇಕು.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಅಂತಹ ಅಭ್ಯರ್ಥಿಗಳು ರಿಜಿಸ್ಟ್ರೇಷನ್ ನಂಬರ್ ಹಾಗೂ ಶುಲ್ಕ ಪಾವತಿಸಿದ ವಿವರಗಳೊಂದಿಗೆ ಸಹಾಯವಾಣಿ ಸಂಖ್ಯೆ 8904985941 ಸಂಪರ್ಕಿಸಬಹುದಾಗಿರುತ್ತದೆ. ತಾಂತ್ರಿಕ ಸಮಸ್ಯೆಯನ್ನು ಹೊರತುಪಡಿಸಿ ಇನ್ನಿತರ ಯಾವುದೇ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-30574901/4957 ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.kpsc.kar.nic.in ಗಮನಿಸಿ


Click it and Unblock the Notifications











