ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

ಬೆಂಗಳೂರಿನ 43 ಪರೀಕ್ಷಾ ಕೇಂದ್ರಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಒಟ್ಟು 27930 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಳಗ್ಗೆ 11 ರಿಂದ 12.30 ರವರೆಗೆ ಪರೀಕ್ಷೆ ಸಮಯ ನಿಗದಿಪಡಿಸಲಾಗಿದೆ.

ಬೆಂಗಳೂರು ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 29 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.

ಬೆಂಗಳೂರಿನ 43 ಪರೀಕ್ಷಾ ಕೇಂದ್ರಗಳಲ್ಲಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ಒಟ್ಟು 27930 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಅಕ್ಟೊಬರ್ 29 ರಂದು ಲಿಖಿತ ಪರೀಕ್ಷೆ

ಬೆಳಗ್ಗೆ 11 ರಿಂದ 12.30 ರವರೆಗೆ ಪರೀಕ್ಷೆ ಸಮಯ ನಿಗದಿಪಡಿಸಲಾಗಿದ್ದು, ಪರೀಕ್ಷೆಯ ವಿವರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಕರೆ ಪತ್ರ ಡೌನ್ಲೋಡ್ ಮಾಡಿಕೊಂಡು ಸೂಚಿಸಿರುವ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ತಿಳಿಸಲಾಗಿದೆ.

ಲಿಖಿತ ಪರೀಕ್ಷೆಗೆ ಬರುವಾಗ ಕರೆಪತ್ರದ ಜೊತೆಗೆ ಯಾವುದಾದರೊಂದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.

ಲಿಖಿತ ಪರೀಕ್ಷೆಗೆ ತರಬೇಕಾದ ದಾಖಲೆಗಳು

  • ಲಿಖಿತ ಪರೀಕ್ಷೆ ಕರೆಪತ್ರ
  • ಗುರುತಿನ ಚೀಟಿ
  • ಆನ್-ಲೈನ್ ಅರ್ಜಿಯ ಜೆರಾಕ್ಸ್ ಪ್ರತಿ

ಪರೀಕ್ಷೆ ವಿವರ

ಪರೀಕ್ಷೆಯು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ 100 ಅಂಕಗಳಿಗೆ ವಸ್ತುನಿಷ್ಟ (ಆಬ್ಜೆಕ್ಟೀವ್) ಮಾದರಿಯದಾಗಿದ್ದು, ಬಹುವಿಧ ಆಯ್ಕೆ ಉತ್ತರಗಳ ಲಿಖಿತ ಪರೀಕ್ಷೆಯಾಗಿರುತ್ತದೆ,

ಸಾಮಾನ್ಯ ಜ್ಞಾನ, ವಿಜ್ಞಾನ, ಭೂಗೋಳ, ಇತಿಹಾಸ, ಭಾರತದ ಸಂವಿಧಾನ, ಭಾರತದ ಸ್ವಾತಂತ್ರ್ಯ ಸಂಗ್ರಾಮ, ಸಾಮಾನ್ಯ ಮಾನಸಿಕ ಸಾಮರ್ಥ್ಯ ಮತ್ತು ನೀತಿ ಶಿಕ್ಷಣ ಇತ್ಯಾದಿಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ.

ಪ್ರತಿ ಸರಿ ಉತ್ತರಕ್ಕೆ 1.00 ಅಂಕವನ್ನು ನೀಡಲಾಗುವುದು ಮತ್ತು ತಪ್ಪು ಉತ್ತರಕ್ಕೆ 0.25 ಅಂಕವನ್ನು ಕಳೆಯಲಾಗುವುದು. ಪರೀಕ್ಷೆಯ ಅವಧಿಯು ಒಂದೂವರೆ ಗಂಟೆಯದ್ದಾಗಿರುತ್ತದೆ.

ಅಭ್ಯರ್ಥಿಗಳು ವಸ್ತುನಿಷ್ಟ ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಮೆರಿಟ್ ಹಾಗೂ ಮೀಸಲಾತಿ ಅನುಗುಣವಾಗಿ ಸಹಿಷ್ಣು ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳಿಗೆ 1:5 ರ ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳು ಪಟ್ಟಿ ತಯಾರಿಸಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Written Examination for POST OF ARMED POLICE CONSTABLE (MEN)-2017 to be held on October 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+