ಇಂದಿನಿಂದ ಬೆಂಗಳೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಪದವಿ ಪರೀಕ್ಷೆ

Posted By:

ಇಂದಿನಿಂದ ಬೆಂಗಳೂರು ವಿಶ್ವವಿದ್ಯಾಲಯದ 1,3,5 ಮತ್ತು 7ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳು ಪ್ರಾರಂಭವಾಗಲಿವೆ.

ಈದ್ ಮಿಲಾದ್ ರಜೆ ಮತ್ತು 500 ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಪಾವತಿಯ ಹೆಚ್ಚುವರಿ ಅವಕಾಶದ ಪರಿಣಾಮ ಮುಂದೂಡಲ್ಪಟ್ಟಿದ್ದ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿವೆ.

ಇಂದಿನಿಂದ ಬೆಂಗಳೂರು ವಿವಿ ಪರೀಕ್ಷೆ

ಈ ಬಾರಿಯ ಪರೀಕ್ಷೆಯಲ್ಲಿ 3.5 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದು, ಈಗಾಗಲೇ ಎಲ್ಲಾ ವಿದ್ಯಾರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದಾರೆ.

ಪರೀಕ್ಷೆ ಡಿ.27 ರೊಳಗೆ ಮುಕ್ತಾಯವಾಗಲಿದೆ. ವಿವಿಯ ಕುಲಪತಿ, ಆಡಳಿತ ಕುಲಸಚಿವ ಮತ್ತು ಮೌಲ್ಯಮಾಪನ ಕುಲಸಚಿವರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ.

ಈ ಹಿಂದೆ ಅಂಕಪಟ್ಟಿಯಲ್ಲಿ ದೋ‍ಷವಿತ್ತು ಎಂದು ಕೆಲವರು ಆರೋಪಿಸಿದ್ದಾರೆ. ಎಲ್ಲೋ ಬೆರಳೆಣಿಕೆಯಷ್ಟು ಅಂಕಪಟ್ಟಿಗಳು ಮಾತ್ರವೇ ದೋಷಪೂರಿತವಾಗಿತ್ತು. ಅದನ್ನು ಸರಿಪಡಿಸಲಾಗಿದೆ ಎಂದು ವಿವಿಯ ಮೌಲ್ಯಮಾಪನ ಕುಲಸಚಿವರು ತಿಳಿಸಿದ್ದಾರೆ.

ಪರೀಕ್ಷೆ ಪ್ರಾರಂಭವಾದ ಮರುದಿನವೇ ಉತ್ತರ ಪತ್ರಿಕೆಗಳ ಸ್ಕ್ಯಾನಿಂಗ್ ಪ್ರಾರಂಭವಾಗಲಿದೆ. ಬಿ.ಕಾಂ ವಿದ್ಯಾರ್ಥಿಗಳು ಸಂಖ್ಯೆ ಹೆಚ್ಚಿದ್ದು, 10 ಲಕ್ಷ ಉತ್ತರ ಪತ್ರಿಕೆಗಳು ಮೌಲ್ಯಮಾಪನ ಮಾಡಿದರೆ ಅರ್ಧದಷ್ಟು ಮೌಲ್ಯಮಾಪನ ಕಾರ್ಯ ಮುಗಿದಂತಾಗುತ್ತದೆ. ಸಾಧ್ಯವಾದಷ್ಟು ಬೇಗ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭಿಸಿ ಫಲಿತಾಂಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

English summary
Bangalore University 1,3,5 and 7th semester degree examinations starts from today.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia