ಕೇಂದ್ರ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) 2019-20 ನೇ ಸಾಲಿನ ಹತ್ತನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ 15ರಿಂದ ಹತ್ತನೇ ತರಗತಿ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 20ಕ್ಕೆ ಕೊನೆಗೊಳ್ಳಲಿದೆ.
ಸಿಬಿಎಸ್ಇ ಇಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಜನವರಿ ತಿಂಗಳ ಮಧ್ಯಂತರದಲ್ಲಿ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗಲಿದ್ದು, ಜನವರಿ ತಿಂಗಳ ಅಂತ್ಯಕ್ಕೆ ಕೊನೆಗೊಳ್ಳಲಿವೆ ಎಂದು ಸಿಬಿಎಸ್ಇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನೂ ಪರೀಕ್ಷೆಗೆ ಸಾಕಷ್ಟು ಸಮಯ ಲಭ್ಯವಿದ್ದು, ವೇಳಾಪಟ್ಟಿಯನ್ನು ಗಮನಿಸಿದ ವಿದ್ಯಾರ್ಥಿಗಳು ಈಗಿನಿಂದಲೇ ಪರೀಕ್ಷಾ ತಯಾರಿಗೆ ವೇಳಾಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ನಡೆಸಿದಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ
ಸಿಬಿಎಸ್‌ಇ ಹತ್ತನೇ ತರಗತಿ ಪರೀಕ್ಷೆಯ ವೇಳಾಪಟ್ಟಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
For Daily Alerts