ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2019: ಸಿಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಭಾರತದೆಲ್ಲೆಡೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಿಟಿಇಟಿ ಪರೀಕ್ಷೆಯನ್ನು ನಡೆಸುತ್ತಿದೆ. ಆಸಕ್ತರು ಸಿಬಿಎಸ್ ಇ ನ ಅಧಿಕೃತ ವೆಬ್ ಸೈಟ್ ನಲ್ಲಿ 2019ರ ನೇಮಕಾತಿ ಅಧಿಸೂಚನೆಯನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಮಾರ್ಚ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಟಿಇಟಿ  ಪರೀಕ್ಷೆಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೀನಿಯರ್ ಸೆಕೆಂಡರಿ, ಡಿಪ್ಲೋಮಾ, ಬಿ.ಇಐ.ಎಡ್.,ಪದವಿ,ಬಿ.ಎಡ್,ಬಿಎ ಅಥವಾ ಬಿಎಸ್ಸಿ.ಎಡ್ ವಿದ್ಯಾರ್ಹತೆಯನ್ನು ಹೊಂದಿರಬೇಕು

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಅಂಗವಿಕಲ/ಮಹಿಳಾ ಅಭ್ಯರ್ಥಿಗಳು 600/-ರೂ ಶುಲ್ಕ ಮತ್ತು ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1200/-ರೂ ಶುಲ್ಕವನ್ನು ಆನ್ ಲೈನ್ ನಲ್ಲಿ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಪಾವತಿಸಲು ಮಾರ್ಚ್8,2019 ಕೊನೆಯ ದಿನವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯು ಜುಲೈ 7,2019 ರಂದು ನಡೆಯುತ್ತದೆ

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಸಿಟಿಇಟಿ ಅಧಿಕೃತ ವೆಬ್ ಸೈಟ್ https://ctet.nic.in/CMS/public/home.aspx ಗೆ ಲಾಗಿನ್ ಆಗಿ
ಸ್ಟೆಪ್ 2: ನಂತರ Apply Online ಲಿಂಕ್ ಗೆ ಹೋಗಿ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅರ್ಜಿಯನ್ನು ಭರ್ತಿ ಮಾಡಿ. ರಿಜಿಸ್ಟ್ರಾರ್ ನಂಬರ್ ಅಥವಾ ಅಪ್ಲಿಕೇಶನ್ ನಂಬರ್ ಅನ್ನು ನೋಟ್ ಮಾಡಿಕೊಳ್ಳಿ
ಸ್ಟೆಪ್ 4: ನಂತರ ನಿಮ್ಮ ಇತ್ತೀಚಿನ ಭಾವಚಿತ್ರ ಮತ್ತು ನಿಮ್ಮ ಸಹಿಯನ್ನು ಅಪ್ ಲೋಡ್ ಮಾಡಿ
ಸ್ಟೆಪ್ 5: ಪರೀಕ್ಷಾ ಶುಲ್ಕವನ್ನು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್ /ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿ
ಸ್ಟೆಪ್ 6: ಎಲ್ಲವೂ ಪೂರ್ಣಗೊಂಡ ನಂತರ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಈ ಪರೀಕ್ಷೆಯ ಬಗೆಗೆ ಇನ್ನಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Central Board Of Secondary Education recruiting candidates to fill their vacancies conducting CTET .
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X