ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2017'ರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ನಿಗದಿಪಡಿಸಿದ್ದ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಈ ಹಿಂದೆ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಏಪ್ರಿಲ್ 26 ಕೊನೆಯ ದಿನ ಎಂದು ತಿಳಿಸಲಾಗಿತ್ತು. ಆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಡೌನ್ಲೋಡ್ ಮಾಡಿಕೊಳ್ಳಲು ಏಪ್ರಿಲ್ 30 ರವರೆಗೂ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಮೇ 2 ಮತ್ತು 3 ನೇ ತಾರೀಖು ಸಿಇಟಿ ಪರೀಕ್ಷೆಗಳು ನಡೆಯಲಿದ್ದು ಪ್ರವೇಶ ಪತ್ರಗಳನ್ನು ಏಪ್ರಿಲ್ 30ರವರೆಗೂ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯನ್ನು 1.85 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಡೌನ್ಲೋಡ್ ಮಾಡಿಕೊಳ್ಳುವ ವಿಧಾನ
- ಕರ್ನಾಟಕ ಪರೀಕ್ಷಾ ಪ್ರಾಧಿಕಾರ 'ಕೆಇಎ' kea.kar.nic.in
- ವೆಬ್ಸೈಟ್ ಗೆ ಭೇಟಿ ನೀಡಿ ಬಲಭಾಗದಲ್ಲಿ ಕಾಣುವ ಸಿಇಟಿ 2017 ಕ್ಲಿಕ್ ಮಾಡಿ
- 'CET-2017 Download Hall Ticket' ಕ್ಲಿಕ್ ಮಾಡಿ
- ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ
- ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ
ಇದನ್ನು ಗಮನಿಸಿ: ಕೆಸಿಇಟಿ ಪರೀಕ್ಷಾ ವಿಧಾನ, ವೇಳಾಪಟ್ಟಿ ಮತ್ತು ಪಠ್ಯಕ್ರಮ
ಪರೀಕ್ಷೆ ನಡೆಯುವ ದಿನಾಂಕಗಳು
ಮೇ 02 , 2017 ಮೇ 03 , 2017 ಮೇ 2ರಂದು ಬೆಳಗ್ಗೆ ಜೀವಶಾಸ್ತ್ರ ನಡೆದರೆ, ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಈ ನಾಲ್ಕು ವಿಷಯಗಳಿಗೆ 60 ಅಂಕಗಳನ್ನು ನಿಗದಿಪಡಿಸಲಾಗಿದೆ.
ಅಂಕಿ ಅಂಶ
ಬೆಂಗಳೂರಿನ 82 ಸೇರಿ ರಾಜ್ಯಾದ್ಯಾಂತ 404 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 94,415 ವಿದ್ಯಾರ್ಥಿ ಹಾಗೂ 90,996 ವಿದ್ಯಾರ್ಥಿನಿಯರು ಸೇರಿದಂತೆ 1,85,411 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. 404 ವೀಕ್ಷಕರು, 808 ವಿಶೇಷ ಜಾಗೃತಿ ದಳದ ಸದಸ್ಯರು, 404 ಪ್ರಶ್ನೆ ಪತ್ರಿಕೆ ಪಾಲಕರು, 11,625 ಕೊಠಡಿ ಮೇಲ್ವಿಚಾರಕರು ಹಾಗೂ 32 ಸಾವಿರ ಅಧಿಕಾರಿಗಳು ಮತ್ತು ಸಿಬ್ಬಂದಿ ನೇಮಕ ಮಾಡಲಾಗಿದೆ. ಕನ್ನಡ ಭಾಷಾ ಪರೀಕ್ಷೆಗೆ ಹೊರನಾಡು ಮತ್ತು ಗಡಿನಾಡಿನ 1,800 ಅಭ್ಯರ್ಥಿಗಳು ಹಾಜರಾಗಲಿದ್ದಾರೆ.


Click it and Unblock the Notifications











