ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) 2020: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕಾನೂನು ಅಧ್ಯಯನಕ್ಕಾಗಿ ನಡೆಯುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ 2020 (ಕ್ಲಾಟ್)ಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ವಿಸ್ತರಿಸಲಾಗಿದೆ.

CLAT: ಪರೀಕ್ಷೆಗೆ ಏ.25ರೊಳಗೆ ಅರ್ಜಿ ಹಾಕಿ

 

ಪೆನ್ನು ಪೇಪರ್ ಮಾದರಿಯ ಪರೀಕ್ಷೆ ಇದಾಗಿದ್ದು, ಈ ಮುಂಚೆ ಮಾರ್ಚ್ 31,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಆದರೆ ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಏಪ್ರಿಲ್ 25,2020ರ ವರೆಗೆ ವಿಸ್ತರಿಸಲಾಗಿದೆ.

ದೇಶದ ಪ್ರತಿಷ್ಠಿತ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್ಎಲ್ಯು) 5 ವರ್ಷದ ಇಂಟಿಗ್ರೇಟೆಡ್ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್ಎಲ್ಎಂ) ಕೋರ್ಸ್ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ವಿದ್ಯಾರ್ಹತೆ:

ಯು ಜಿ ಕೋರ್ಸ್ ಗೆ ಪ್ರವೇಶ ಪಡೆಯಲು ಅಭ್ಯರ್ಥಿಗಳು ಹನ್ನೆರಡನೇ ತರಗತಿ ಉತ್ತೀರ್ಣರಾಗಿರಬೇಕು. ಪಿ ಜಿ ಕೋರ್ಸಿಗೆ ಅಭ್ಯರ್ಥಿಗಳು ಎಲ್ ಎಲ್ ಬಿ/ಐದು ವರ್ಷದ ಇಂಟಿಗ್ರೇಟೆಡ್ ಎಲ್ ಎಲ್ ಬಿ (ಹಾನರ್ಸ್) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು..

ಕ್ಲಾಟ್ ಪರೀಕ್ಷೆಗೆ ಯಾವುದೇ ವಯಸ್ಸಿನ ಮಿತಿ ಇಲ್ಲ.

ಕಾಮನ್ ಲಾ ಅಡ್ಮಿಷನ್ ಟೆಸ್ಟ್ ಪಾಸಾಗಲು ಇಲ್ಲಿದೆ ಸುಲಭ ಟ್ರಿಕ್ಸ್

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 25,2020

ಕ್ಲಾಟ್ ಪರೀಕ್ಷೆ ದಿನಾಂಕ: ಮೇ 24,2020

ಪರೀಕ್ಷೆ ಕೀ-ಉತ್ತರ ಬಿಡುಗಡೆ: ಮೇ 25,2020

ಆಕ್ಷೇಪಣೆ ಸಲ್ಲಿಸಲು ಪ್ರಾರಂಭ ದಿನಾಂಕ: ಮೇ 26,2020

ಆಕ್ಷೆಪಣೆ ಸಲ್ಲಿಸಲು ಕೊನೆಯ ದಿನಾಂಕ: ಮೇ 29,2020

ಅಂತಿಮ ಕೀ-ಉತ್ತರ ಬಿಡುಗಡೆ ದಿನಾಂಕ: ಜೂನ್ 1,2020

ಫಲಿತಾಂಶ ಪ್ರಕಟ ದಿನಾಂಕ: ಜೂನ್ 7,2020

ಸೀಟು ಹಂಚಿಕೆ:

ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳ ಸೀಟು ಹಂಚಿಕೆ ನಡೆಯುತ್ತದೆ. ಮುಖ್ಯವಾಗಿ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕದ ಮೇಲೆ ತಮ್ಮದೇ ಆದ ಕಾನೂನು ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದು.

 

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: https://consortiumofnlus.ac.in/

For Quick Alerts
ALLOW NOTIFICATIONS  
For Daily Alerts

English summary
CLAT 2020 examination postponed, important dates check here. candidates can apply before 25th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X